ನೀರಿನ ಸಮಸ್ಯೆ ನಿರ್ವಹಣೆಗೆ 10 ದಿನದಲ್ಲಿ ಕಾರ್ಯಪಡೆ ರಚನೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೇಸಿಗೆ ಆರಂಭವಾಗುತ್ತಿರುವ ಕಾರಣ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮೇಲ್ವಿಚಾರಣೆಗಾಗಿ 10 ದಿನದೊಳಗೆ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚಿಸಿ ಕಾರ್ಯಪಡೆ ರಚಿಸಲಾಗುವುದು ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಎಚ್.ಸಿ.ಬಾಲಕೃಷ್ಣ ರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

‘ಮುಂದಿನ ವಾರ ನಡೆಯುವ ಕಂದಾಯ, ಪಶುಸಂಗೋಪನಾ ಸಚಿವರು ಸೇರಿದಂತೆ ಹಲವರನ್ನು ಒಳಗೊಂಡ ಸಂಪುಟ ಉಪಸಮಿತಿ ಸಭೆಯಲ್ಲಿ ಬೇಸಿಗೆಯಲ್ಲಿ ಪರಿಸ್ಥಿತಿ ನಿರ್ವಹಣೆ ಬಗ್ಗೆ ಚರ್ಚಿಸಲಾಗುವುದು. ಕಾರ್ಯಪಡೆ ರಚನೆ ಸೇರಿದಂತೆ ಕ್ಷೇತ್ರವಾರು ಅನುದಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಲಿದೆ’ ಎಂದು ಹೇಳಿದರು. ಸಮಸ್ಯೆ

ಇದನ್ನೂ ಓದಿ: ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜು ಸ್ಥಗಿತ; ಮಾ. 10ರಿಂದ ಹೋಟೆಲ್‌ಗಳ ಬಂದ್ ಸಾಧ್ಯತೆ

‘ರಾಜ್ಯದಾದ್ಯಂತ ಬೇಸಿಗೆಯಲ್ಲಿ ಪರಿಸ್ಥಿತಿ ನಿರ್ವಹಣೆಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು. ಕಳೆದ 10- 15 ವರ್ಷಗಳಲ್ಲಿ ಬೇಸಿಗೆಯಲ್ಲಿನೀರಿನ ಅಭಾವ ಸೃಷ್ಟಿಯಾಗಿದ್ದ ಸ್ಥಳಗಳ ಮಾಹಿತಿ ಇದೆ. ಪ್ರತಿ ಜಿಲ್ಲಾ ಪಂಚಾಯಿತಿ ವತಿಯಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ. ಆ ಎಲ್ಲ ಮಾಹಿತಿ ಆಧರಿಸಿ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಲಾಗುವುದು’ ಎಂದು ತಿಳಿಸಿದರು.

ಇದನ್ನೂ ನೋಡಿ: ಭೂ ಹಕ್ಕಿನ ಹೋರಾಟದ ಧ್ವನಿ | ಮರಕುಂಬಿ ಹೋರಾಟದ ರೂವಾರಿ ನಿತ್ಯಾನಂದ ಸ್ವಾಮಿ Janashakthi Media

Donate Janashakthi Media

Leave a Reply

Your email address will not be published. Required fields are marked *