ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಆರ್.ಎನ್. ರವಿ ಪ್ರಮಾಣ ವಚನ ಸ್ವೀಕಾರ

ಕೋಲ್ಕತ್ತಾ: ತಮಿಳುನಾಡು ಮಾಜಿ ರಾಜ್ಯಪಾಲ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಆರ್.ಎನ್. ರವಿ ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಮಾರ್ಚ್‌ 12ರಂದು ಪ್ರಮಾಣ ವಚನ ಸ್ವೀಕರಿಸಿದರು. ಬಂಗಾಳ

ಮಾ. 12ರ ಬೆಳಗ್ಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಕಲ್ಕತ್ತಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಅವರು ಆರ್ ಎನ್ ರವಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇದನ್ನೂ ಓದಿ: ಬಾಬಾಸಾಹೇಬ್ ಅಂಬೇಡ್ಕರ್ ದೃಷ್ಟಿಯಲ್ಲಿ ಭಾರತದ ಚರಿತ್ರೆ ರಚನೆ ಹಾಗೂ ಅದರ ಸ್ವರೂಪ: ವಸ್ತುನಿಷ್ಠ ನೋಟ

ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಿಧಾನಸಭಾ ಸ್ಪೀಕರ್ ಬಿಮನ್ ಬ್ಯಾನರ್ಜಿ, ಹಿರಿಯ ಸಚಿವ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಹಾಗೂ ಎಡಪಂಥೀಯ ಅಧ್ಯಕ್ಷ ಬಿಮನ್ ಬೋಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಆದರೆ ವಿರೋಧ ಪಕ್ಷ ಬಿಜೆಪಿ ಪಾಳಯದಿಂದ ಯಾವುದೇ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾರ್ಚ್ 5 ರಂದು ಸಿ.ವಿ. ಆನಂದ ಬೋಸ್ ಅವರು ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರಿಂದ ತೆರವಾದ ಸ್ಥಾನಕ್ಕೆ ರವಿ ಅವರನ್ನು ನೇಮಕ ಮಾಡಲಾಗಿತ್ತು. ರವಿ ಈ ಹಿಂದೆ ನಾಗಾಲ್ಯಾಂಡ್, ಮೇಘಾಲಯ ಮತ್ತು ತಮಿಳುನಾಡು ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ನೋಡಿ: ಮಹಿಳಾ ದೌರ್ಜನ್ಯ – ಸವಾಲುಗಳು, ಬಿಡುಗಡೆಯ ಸಾಧ್ಯತೆಗಳು Janashakthi Media

Donate Janashakthi Media

Leave a Reply

Your email address will not be published. Required fields are marked *