ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಹಸ್ತಕ್ಷೇಪ; ಸಿಎಂ ಸಿದ್ದರಾಮಯ್ಯ ವಿರುದ್ದ ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಹೈಕೋರ್ಟ್‌ನ ಬೆಸ್ಕಾಂ ಎಇ ಎಸ್. ಚೇತನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ಟಿ.ಎಂ. ನದಾಫ್ ಅವರಿದ್ದ ಪೀಠವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದನ್ನು ಗಂಭೀರವಾಗಿ ಪ್ರಶ್ನಿಸಿದ್ದೂ, ವರ್ಗಾವಣೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿಗಳ ನೇರ ಹಸ್ತಕ್ಷೇಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರಿ ನೌಕರರ ವರ್ಗಾವಣೆ ವಿಚಾರವನ್ನು ಸಂಬಂಧಿಸಿದ ಇಲಾಖೆಗಳೇ ನಿರ್ವಹಿಸಬೇಕು. ಮುಖ್ಯಮಂತ್ರಿಗಳ ಕಚೇರಿ ಇಂತಹ ಮನವಿಗಳನ್ನು ಸ್ವೀಕರಿಸುವುದು ಸರಿಯಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಮಾಡಲು ಮುಖ್ಯಮಂತ್ರಿಗಳಿಗೆ ಇನ್ನಷ್ಟು ಮಹತ್ವದ ಕೆಲಸಗಳಿದ್ದು, ಇಂತಹ ವಿಷಯಗಳಿಗೆ ಸಮಯ ವ್ಯಯಿಸಬಾರದು ಎಂದು ಸೂಚಿಸಿದೆ. ಈ ಸಂಬಂಧ ಹೈಕೋರ್ಟ್ ತನ್ನ ಆದೇಶದ ಪ್ರತಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲು ಸೂಚನೆ ನೀಡಿದೆ.

ಇದನ್ನೂ ಓದಿ: ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಉಳಿಸಲು ದೇಶವ್ಯಾಪಿ ಚಳುವಳಿ: ಮೇ 15 ರಂದು ಮುಷ್ಕರ

ಪ್ರಕರಣ ಸಂಬಂಧ ಸಿಎಂ ನೀಡುವ ವರ್ಗಾವಣೆ ಶಿಫಾರಸುಗಳ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದಲೂ ನಿಲುವು ಕೇಳಲಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಕಾರ್ಯದರ್ಶಿ, ಸಿಎಂ ಕಚೇರಿಯಿಂದ ನೀಡುವ ಟಿಪ್ಪಣಿಗಳು ಕೇವಲ ಶಿಫಾರಸುಗಳಾಗಿದ್ದು, ಅಂತಿಮ ಆದೇಶವನ್ನು ಸಂಬಂಧಪಟ್ಟ ಇಲಾಖೆ ನೀಡುತ್ತದೆ ಎಂದು ಸ್ಪಷ್ಟಪಡಿಸಿದ್ದರು.

ಮತ್ತೊಂದೆಡೆ, ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿಯೂ ಸಿಎಂ ಕಚೇರಿ ಪಾತ್ರ ವಹಿಸಿದ್ದ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆದಿವೆ.

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಇಲಾಖೆಗಳ ಕಾರ್ಯಚಟುವಟಿಕೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಹೈಕೋರ್ಟ್ ನೀಡಿದ ಈ ತೀಕ್ಷ್ಣ ಸೂಚನೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಇದನ್ನೂ ನೋಡಿ: ₹1ಕ್ಕೆ 1 ಲೀಟರ್ ಹಾಲು – ಫ್ಲಿಪ್‌ಕಾರ್ಟ್ ವಿರುದ್ಧ ಸಿಡಿದೆದ್ದ ರೈತರು Janashakthi Media

Donate Janashakthi Media

Leave a Reply

Your email address will not be published. Required fields are marked *