ಬೆಂಗಳೂರು: ತುಮಕೂರಿನಲ್ಲಿ ವಿಚಾರಣೆ ಸಂದರ್ಭದಲ್ಲಿ ನಡೆದ ಲಾಕಪ್ ಡೆತ್ ಬಗ್ಗೆ ಕುಟುಂಬದವರ ಆರೋಪ ಬೆನ್ನಲ್ಲೇ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಿ, ನಗರದಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.
ನಿನ್ನೆ ವಿಚಾರಣೆ ಮಾಡುವಾಗಲೇ ಸಾವಾಗಿದೆ. ಇನ್ನೂ ಯಾವ ಕಾರಣದಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದುಬಂದಿಲ್ಲ. ಈ ಹಿನ್ನೆಲೆ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.
ಇದನ್ನೂ ಓದಿ: ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಉಳಿಸಲು ದೇಶವ್ಯಾಪಿ ಚಳುವಳಿ: ಮೇ 15 ರಂದು ಮುಷ್ಕರ
ಇನ್ನೂ ಈ ಸಾವಿನ ಹಿಂದೆ ಮೃತನ ಕುಟುಂಬದವರು ಹಲ್ಲೆ ಮಾಡಿರುವ ಆರೋಪ ಮಾಡಿದ್ದಾರೆ. ಸಿಐಡಿ ತನಿಖೆಯಲ್ಲಿ ಹೊಡೆದಿದ್ರೂ ಗೊತ್ತಾಗಲಿದೆ ಎಂದು ಹೇಳಿದರು.
ಮರಣೋತ್ತರ ಪರೀಕ್ಷೆಯಲ್ಲಿ ಕೂಡ ಗೊತ್ತಾಗುತ್ತದೆ. ಎಲ್ಲ ಘಟನೆಗಳ ಬಗ್ಗೆ ತನಿಖೆ ಮಾಡಿ ಸಿಐಡಿ ವರದಿ ಕೊಡುತ್ತೆ. ಹಲ್ಲೆಯ ಘಟನೆ ಆಗಿದ್ರೆ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ಸ್ಪಷ್ಟಪಡಿಸಿದರು.
ಇದನ್ನೂ ನೋಡಿ: “ಯುದ್ಧದಿಂದ ಅಡುಗೆಮನೆಗೆ: ಹೊರೆ ಯಾರಿಗೆ?” Janashakthi Media
