ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಲ್ಲಿಸಿರುವ ಚಾರ್ಜ್‌ಶೀಟ್ ವಿರುದ್ಧ ಮಾರ್ಚ್ 20ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಜ್ವಲ್
‘ಈ ಪ್ರಕರಣದಲ್ಲಿ ನನ್ನ ಸಂಬಂಧಿ ಸೇರಿದಂತೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಹೆಸರನ್ನು ಸೇರಿಸಿರುವುದು ಖಂಡನೀಯ. ಚಾರ್ಜ್‌ಶೀಟ್‌ನಲ್ಲಿ ಅನೇಕ ತಾಂತ್ರಿಕ ದೋಷಗಳಿದ್ದು, ಎ-3 ಮತ್ತು ಎ4 ಆರೋಪಿಗಳ ಉಲ್ಲೇಖವೇ ಇಲ್ಲ’ ಎಂದು ಅವರು ದೂರಿದರು.
‘ತನಿಖೆಯನ್ನು ದಾರಿ ತಪ್ಪಿಸಲು ಉದ್ದೇಶಪೂರ್ವಕವಾಗಿ ಜೆಡಿಎಸ್ ಕಾರ್ಯಕರ್ತರ ಹೆಸರನ್ನು ಸೇರಿಸಲಾಗಿದೆ. ಆದರೆ ಪ್ರಭಾವಿ ವ್ಯಕ್ತಿಗಳ ಹೆಸರುಗಳನ್ನು ಕೈಬಿಡಲಾಗಿದೆ’ ಎಂದು ಆರೋಪಿಸಿದರು. ಪ್ರಜ್ವಲ್
ಇದನ್ನೂ ಓದಿ: 20ಕ್ಕೂ ಹೆಚ್ಚು ವರ್ಗಾವಣೆಗಳ ನಡುವೆಯೂ ಪ್ರಾಮಾಣಿಕತೆ ಉಳಿಸಿದ ಐಎಎಸ್ ಅಧಿಕಾರಿ
‘ಎ1 ಆರೋಪಿಯಾಗಿರುವ ನವೀನ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರುತ್ತದೆ. ಲೋಕಸಭೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ಪೆನ್‌ಡ್ರೈವ್ ಹಂಚಿಕೆ ನಡೆಸಿರುವುದು ಜಿಲ್ಲೆಯ ಜನರಿಗೆ ತಿಳಿದಿದೆ. ಪ್ರಕರಣದಲ್ಲಿ ನಿಜವಾದ ಆರೋಪಿಗಳನ್ನು ಬಿಟ್ಟು ತಮ್ಮ ಸಂಬಂಧಿ ಸೇರಿದಂತೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಸೇರಿಸಿರುವುದರಲ್ಲಿ ರಾಜಕೀಯ ಸಂಚು ಅಡಗಿದೆ’ ಎಂದು ದೂರಿದರು.
‘ಈ ರೀತಿಯ ಏಕಪಕ್ಷೀಯ ಚಾರ್ಜ್‌ಶೀಟ್ ಸಲ್ಲಿಕೆ ಖಂಡನೀಯ. ಕೆಲವು ಪ್ರಭಾವಿಗಳ ಕೈವಾಡ ಇದರಲ್ಲಿ ಇದೆ. ಸರ್ಕಾರವೂ ಸೂಕ್ತ ಕ್ರಮ ಕೈಗೊಂಡಿಲ್ಲ. ನನ್ನ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಕುಟುಂಬದ ನಡುವಿನ ಸಂಬಂಧ ಹಾಳು ಮಾಡಲು ಉದ್ದೇಶಪೂರ್ವಕವಾಗಿ ಪಿತೂರಿ ರೂಪಿಸಲಾಗಿದೆ’ ಎಂದು ಹೇಳಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ದ್ಯಾವೇಗೌಡ, ಮಾಧ್ಯಮ ವಕ್ತಾರ ರಘು ಹೊಂಗೆರೆ, ಸಮೀರ್ ಅಹ್ಮದ್ ಇದ್ದರು.
ಇದನ್ನೂ ನೋಡಿ: ಪಿಚ್ಚರ್ ಪಯಣ – 170 | ಚಿತ್ರ : ಮ್ಯಾಗೆಲ್ಲನ್, ವಿಶ್ಲೇಷಣೆ : ಮ ಶ್ರಿ ಮುರಳಿ ಕೃಷ್ಣ Janashakthi Media
