ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 23ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘವು ತಿಳಿಸಿದೆ. ಮಾರ್ಚ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದಾ, ‘ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಪ್ರಾರಂಭಿಸಬೇಕು. ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಮಾಡುವ ಆಹಾರ ಪದಾರ್ಥಗಳ ಗುಣಮಟ್ಟ ಸರಿ ಇಲ್ಲದ ಕಾರಣ ಬಿಐಎಸ್ ಪರವಾನಗಿ ರದ್ದುಪಡಿಸಬೇಕು. ಸ್ಥಳೀಯವಾಗಿ ಸಿಗುವ ಆಹಾರ ಪದಾರ್ಥಗಳನ್ನು ಅಂಗನವಾಡಿಗೆ ಪೂರೈಕೆ ಮಾಡಬೇಕು’ ಎಂದು ಆಗ್ರಹಿಸಿದರು
ಇದನ್ನೂ ಓದಿ: ಉಮರ್ ಖಾಲಿದ್ ಬಂಧನ ಕಾನೂನುಬಾಹಿರ: ಐಕ್ಯರಾಷ್ಟ್ರ ಸಮಿತಿ ತೀರ್ಪು
‘2011ರಿಂದ 2023ರ ನಡುವೆ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಕೂಡಲೇ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಬೇಕು. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮೇಲ್ವಿಚಾರಕಿಯರು ಹಾಗೂ ಸಿಡಿಪಿಒ ಹುದ್ದೆಗಳನ್ನು ಭರ್ತಿ ಮಾಡಬೇಕು. ಚುನಾವಣೆ ಕೆಲಸಗಳಿಂದ ಅಂಗನವಾಡಿ ನೌಕರರನ್ನು ಬಿಡುಗಡೆಗೊಳಿಸಬೇಕು’ ಎಂದು ಒತ್ತಾಯಿಸಿದರು.
‘ನಗರ ಪ್ರದೇಶಗಳಲ್ಲಿ ಸಹಾಯಕಿಯರ ಆಯ್ಕೆಗೆ ಇರುವ ಮಾನದಂಡ ಬದಲಾವಣೆ ಮಾಡಬೇಕು. ನಗರ ಪ್ರದೇಶಗಳಲ್ಲಿ ಇರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಮೊಟ್ಟೆ, ಬಾಡಿಗೆ, ಎಲ್ಪಿಜಿ ಸಿಲಿಂಡರ್, ಕರೆನ್ಸಿಯ ಹಣವನ್ನು ಮುಂಗಡವಾಗಿ ಪಾವತಿಸಬೇಕು. ಸಾಮೂಹಿಕ ಆರೋಗ್ಯ ವಿಮೆಯ ಸೌಲಭ್ಯ ನೀಡಬೇಕು’ ಎಂದು ತಿಳಿಸಿದರು.
ಇದನ್ನೂ ನೋಡಿ: “ಯುಗಾದಿ: ಕಾವ್ಯದಲ್ಲಿ ಮೂಡುವ ಜೀವನದ ನಂಟು” Janashakthi Media
