ಬೆಂಗಳೂರು: ಮಾರ್ಚ್ 22ರಂದು ರಾಜ್ಯದ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಇಬ್ಬರು ಅಭ್ಯರ್ಥಿಗಳ ಹೆಸರಿಗೆ ಅಂತಿಮ ಮುದ್ರೆ ಒತ್ತಿದ್ದಾರೆ. ಉಪಚುನಾವಣೆ
1. ಬಾಗಲಕೋಟೆ (ಕ್ಷೇತ್ರ ಸಂಖ್ಯೆ – 24): ಉಮೇಶ್ ಮೇಟಿ
2. ದಾವಣಗೆರೆ ದಕ್ಷಿಣ (ಕ್ಷೇತ್ರ ಸಂಖ್ಯೆ – 107): ಸಮರ್ಥ್ ಮಲ್ಲಿಕಾರ್ಜುನ್
ಇದನ್ನೂ ಓದಿ: ರಾಜ್ಯಸಭಾ ಚುನಾವಣೆ ವೇಳೆ ಅಡ್ಡ ಮತದಾನ; 6 ಬಿಜೆಡಿ ಶಾಸಕರು ಅಮಾನತು
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಈ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ದಿವಂಗತ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದ್ದರೆ, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಲಾಗಿದೆ.
ಅಭ್ಯರ್ಥಿಗಳ ಘೋಷಣೆಯ ಬೆನ್ನಲ್ಲೇ ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಕಂಡುಬಂದಿದೆ.
ಇದನ್ನೂ ನೋಡಿ: ಮುಟ್ಟಿನ ರಜೆಜೆ ಏಕಿಷ್ಟು ಸಿಟ್ಟು , ಅದು ನಮ್ಮ ಹುಟ್ಟಿನ ಗುಟ್ಟು – ಕೆ.ಎಸ್. ವಿಮಲಾ Janashakthi Media
