ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳಾಯಿತು. ಸರ್ಕಾರ ಕೂಡ ICDS 50ರ ಕಾರ್ಯಕ್ರಮವನ್ನು ನಡೆಸಿದೆ. ಪಾಲನೆ – ಪೋಷಣೆ – ಶಿಕ್ಷಣ ಸಂವಿಧಾನ ಬದ್ದ ಕರ್ತವ್ಯಗಳಿವೆ ಮತ್ತು 2013 ರ ಆಹಾರ ಭದ್ರತಾ ಕಾಯ್ದೆ 2009 ರ ಕಡ್ಡಾಯ ಶಿಕ್ಷಣ ಕಾಯ್ದೆಯ ಕರ್ತವ್ಯಗಳನ್ನು ಶಾಸನ ಬದ್ದವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮುಖಾಂತರ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರು ಜಾರಿ ಮಾಡುತ್ತಿದ್ದಾರೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮೀ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್. ಎಸ್. ಸುನಂದಾ ತಿಳಿಸಿದರು. ವೇತನ
ಸುಪ್ರಿಂ ಕೋರ್ಟ್ ಮತ್ತು ಗುಜರಾತ್ ಹೈ ಕೋರ್ಟ್ಗಳು ಇವರನ್ನು 3 ಮತ್ತು ೪ನೇ ಗ್ರೇಡ್ ನೌಕರರಾಗಿ ಪರಿಗಣಿಸಲು ಜಂಟೀ ನಿಯಮಗಳನ್ನು ಕೇಂದ್ರ ರಾಜ್ಯ ಸರ್ಕಾರಗಳು ರೂಪಿಸಬೇಕೆಂದೂ ತೀರ್ಪು ನೀಡಿದೆ ಎಂದರು. ವೇತನ
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನ ಗೊಳಿಸಲು ಶಿಕ್ಷಣ ಇಲಾಖೆ 10000 ಶಾಲೆಗಳಲ್ಲಿ LKG-UKG ಪ್ರಾರಂಬಿಸಲು 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳಲ್ಲೆ LKG-UKG ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಾಗಿ ಪರಿವರ್ತಿಸಲು ತೀರ್ಮಾನಿಸಿದೆ. ವೇತನ
ಇದನ್ನೂ ಓದಿ: ಅಧಿಕಾರಿ ಆತ್ಮಹತ್ಯೆ ಪ್ರಕರಣ: ಪಂಜಾಬ್ ಸಚಿವ ಭುಲ್ಲರ್ ರಾಜೀನಾಮೆ, FIR ದಾಖಲು
ಇದೊಂದು ಐತಿಹಾಸಿಕ ತೀರ್ಮಾನ ಆದರೂ ಇದಕ್ಕೆ ಬೇಕಾಂದಂತಹ ಹಣಕಾಸು ಬಿಡುಗಡೆ ಇಲ್ಲದೆ ನಿಧಾನ ಗತಿಯಲ್ಲಿ ಇದೆ ಆದರೆ ಶಿಕ್ಷಣ ಇಲಾಖೆಯಲ್ಲಿ ಎಲ್ಲೆಡೆ LKG-UKG ತೆರೆಯಲು ಅಂಗನವಾಡಿ ಪಲಾನುಭವಿಗಳನ್ನು ಕಸಿಯಲು ಮುಂದಾಗಿ ಯೋಜನೆಯನ್ನು ದುರ್ಬಲ ಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.
ಈ ಯೋಜನೆ ಕೆಲಸಗಳಲ್ಲದೆ ರಾಜ್ಯ ಸರ್ಕಾರದ ೫ ಗ್ಯಾರಂಟಿಗಳ ಜಾರಿಯ ಮಾಡುವಲ್ಲಿ ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಯೋಜನೆಯನ್ನ ಜನತೆಗೆ ತಲಪಿಸುವ ಕೆಲಸದಲ್ಲಿ ಸಂಪೂರ್ಣವಾಗಿ ಸರ್ಕಾರಕ್ಕೆ ಬೆನ್ನಲುಬಾಗಿ ಕೆಲಸ ಮಾಡುತ್ತಿದ್ದಾರೆ.
ಆದರೂ ರಾಜ್ಯದಲ್ಲಿ ಇರುವ ಕಾಂಗ್ರೆಸ್ ಪಕ್ಷ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ 15,000-10,000 ಇನ್ನ ಹೆಚ್ಚಳ ಮಾಡಲು ಮುಂದಾಗಲಿಲ್ಲ, ರಾಜ್ಯದಲ್ಲಿ ಈ ಬಾರಿ ಬಜೆಟ್ನಲ್ಲಿ ತಮ್ಮ ಸರ್ಕಾರ ನೀಡಿದ ಭರವಸೆಯನ್ನು ಪೂರ್ಣಗೊಳಿಸಲು ಸಾದ್ಯವಾಗಲಿಲ್ಲ. 1948ರ ಕನಿಷ್ಠ ವೇತನ ಕಾಯ್ದೆಯಡಿಯಲ್ಲಿ ತಿಳಿಸಿದಂತೆ 4 ಗಂಟೆಗಿಂತ ಹೆಚ್ಚು ಕೆಲಸ ಮಾಡುವವರಿಗೆ ಕನಿಷ್ಠ ವೇತನ ನೀಡಬೇಕು ಎಂದು ತಿಳಿಸಿದರೂ ಯಾವುದೇ ಸರ್ಕಾರಗಳು ಇದನ್ನು ಜಾರಿ ಮಾಡಲು ಮುಂದಾಗಿಲ್ಲ.
ನಮ್ಮ ಬೇಡಿಕೆಗಳು
1. 6 ವರ್ಷದೊಳಗಿನ ಮಕ್ಕಳು ICDS ನಡಿಯಲ್ಲಿರುವುದನ್ನು ಖಾತ್ರಿ ಪಡಿಸಿ.
ICDS ಯೋಜನೆ ಪ್ರಾರಂಭವಾಗಿರುವುದೇ 6 ವರ್ಷದೊಳಗಿನ ಮಕ್ಕಳಿಗಾಗಿ ಅಂಗನವಾಡಿ ಕೇಂದ್ರದ ಮುಖಾಂತರ ಆಹಾರ, ಆರೋಗ್ಯ ಮತ್ತು ಶಿಕ್ಷಣ ಕೊಡಲಾಗುತ್ತಿದೆ.
ಇಂದಿನ ಸಾಮಾಜಿಕ ವ್ಯವಸ್ಥೆಗನುಗುಣವಾಗಿ ಅಂಗನವಾಡಿ ಕೇಂದ್ರಗಳು ಬಹಳಷ್ಟು ವೈಜ್ಞಾನಿಕವಾಗಿ ಮುಂದುವರೆದೂ ಕೆಲಸ ಮಾಡುತ್ತಿವೆ. ಈ ಕೇಂದ್ರಗಳಲ್ಲಿ ಇಂದು ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕೊಡಲಾಗುತ್ತಿದೆ. 2025 ನವೆಂಬರ್ ನಲ್ಲಿ ರಾಜ್ಯದ ಮುಖ್ಯಮಂತ್ರಿಗಳು 5,000 ಅಂಗನವಾಡಿ ಕೇಂದ್ರಗಳಲ್ಲಿ LKG-UKG ಯನ್ನು ಪ್ರಾರಂಭಿಸಲು ಘೋಷಿಸಿ 12/11/2025 ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ಮಾಡಿದೆ.
ಶಿಕ್ಷಣ ಇಲಾಖೆ2025 ರಲ್ಲಿ 5,000 ಸರ್ಕಾರಿ ಶಾಲೆಯಲ್ಲಿ LKG-UKG ಪ್ರಾರಂಭಿಸುವುದಾಗಿ ಹೇಳಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ – 1,105 ಶಾಲೆ, ಪಿ.ಎಮ್.ಶ್ರಿ – 126, KKRDB – 1,126 ಮ್ಯಾಗ್ನೆಟ್- 1,699, ಸೇರಿದಂತೆ – 4,056 ಶಾಲೆಗಳಲ್ಲಿ LKG-UKG ನಡೆಸಲು ಅನುಮತಿ ನೀಡಿದೆ. ಈ ಶಾಲೆಗಳಿಗೆ 4 ರಿಂದ 5 ವರ್ಷದ ಮಕ್ಕಳು ಒಂದು ಶಾಲೆಗೆ 20 ರಿಂದ 40 ಮಕ್ಕಳು ಮಧ್ಯಾಹ್ನದ ಊಟ 418 ಕ್ಯಾಲೋರಿ, 8.7 ಗ್ರಾಂ ಪ್ರೋಟಿನ್ ಇರುವ ಆಹಾರ, ಕೊಡಬೇಕು ಎಂಬ ನಿಯಮಗಳನ್ನು ರೂಪಿಸಿಕೊಂಡಿದ್ದಾರೆ.

ಹಾಗೆಯೇ ಶಾಲಾ ಕಾಂಪೌಂಡ್ನೊಳಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಇದನ್ನು ಪ್ರಾರಂಭಿಸಲಾಗುತ್ತಿದೆ ಎಂದು ನಡಾವಳಿಯಲ್ಲಿ ಹೇಳಿ 14/14/2025ರಲ್ಲಿ ಹೇಳಿದ ಆದೇಶದಲ್ಲಿ ಹೇಳಲಿಲ್ಲ. ಆದ್ದರಿಂದ ಇಡೀ ರಾಜ್ಯದಲ್ಲಿ ಶಾಲಾ ಕಾಂಪೌಂಡ್ ಅಲ್ಲದೇ ಎಲ್ಲಡೆ ಪ್ರಾರಂಭಿಸಲಾಗುತ್ತಿದೆ. ಇದರಿಂದ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳ ಸಂಖ್ಯೆಯ ಮೇಲೆ ಪರಿಣಾಮ ಬೀರುತ್ತಿದೆ.
ಆದ್ದರಿಂದ 14/11/2025 ಶಿಕ್ಷಣ ಇಲಾಖೆ ಮಾಡಿರುವ ಆದೇಶ ರದ್ದು ಮಾಡಬೇಕು, ಬಜೆಟ್ನಲ್ಲಿ ಘೋಷಿಸಿರುವಂತೆ 800 ಪಬ್ಲಿಕ್ ಶಾಲೆಗಳಲ್ಲಿ LKG-UKG ಪ್ರಾರಂಭಿಸುವಾಗ ಆ ಗ್ರಾಮಗಳಲ್ಲಿರುವ ಅಂಗನವಾಡಿ ಕೇಂದ್ರಗಳ ಪರಿಸ್ಥಿತಿಯನ್ನು ಅವಲೋಕಿಸಬೇಕು.
ರಾಜ್ಯದಲ್ಲಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿಯೂ LKG-UKG ಪ್ರಾರಂಭಿಸಲು ಆದೇಶಿಸಿ ಅಗತ್ಯವಿರುವ ಬಜೆಟ್ನ್ನು ಮೀಸಲಿಡಬೇಕು ಎಂದು ವಿನಂತಿಸುತ್ತೇವೆ.
2. ಎಲ್ಲ ಅಂಗನವಾಡಿ ನೌಕರರನ್ನು ಕನಿಷ್ಠಕೂಲಿಯ ಕಾಯ್ದೆಯ ವ್ಯಾಪ್ತಿಗೆ ತಂದು ESI, PFನ್ನು ಕೊಡಬೇಕು.
3. ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಮಾಡುವ ಆಹಾರ ಪದಾರ್ಥಗಳು ಗುಣಮಟ್ಟ ಸರಿ ಇಲ್ಲದ ಕಾರಣ BIS ಪರವಾನಿಗೆ ರದ್ದು ಮಾಡಿ ಸ್ಥಳೀಯವಾಗಿ ಸಿಗುವ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯ ಆಹಾರ ಸರಬರಾಜು ಮಾಡಬೇಕು.
4. ಶಿಶು ಅಭಿವೃದ್ದಿ ಯೋಜನೆಗಾಗಿ ದುಡಿದು ಬರಿಗೈಯಲ್ಲಿ 2011 ರಿಂದ 2023 ಮಾರ್ಚ್ ತನಕ ನಿವೃತ್ತರಾದ ಕಾರ್ಯಕರ್ತೆ ಸಹಾಯಕಿಯರಿಗೂ ಕೂಡಲೇ ಗ್ರಾಚ್ಯುಟಿ ಹಣ 183 ಕೋಟಿ ಕೂಡಲೇ ಬಿಡುಗಡೆ ಮಾಡಬೇಕು.
5. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ತುಂಬಬೇಕು ಮತ್ತು ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕಿ, CDPO ಹುದ್ದೆ ತುಂಬಬೇಕು.
6. ಚುನಾವಣೆ ಕೆಲಸಗಳಿಂದ (BLO) ಅಂಗನವಾಡಿ ನೌಕರರನ್ನು ಬಿಡುಗಡೆ ಮಾಡಬೇಕು. ಈಗಾಗಲೇ ರಾಜ್ಯದಲ್ಲಿBLO ಕಾರಣಗಳಿಂದ ವಜಾಗೊಳಿಸಿರುವ ಕಾರ್ಯಕರ್ತೆಯರ ವಜಾ ಅಮಾನತ್ತು ತೆರವು ಗೊಳಿಸಬೇಕು.
7. ನಗರ ಪ್ರದೇಶಗಳಲ್ಲಿ ಸಹಾಯಕಿ ಆಯ್ಕೆಗೆ ಇರುವ ಮಾನದಂಡ ಬದಲಾಯಿಸಬೇಕು ಮತ್ತು ನಗರ ಪ್ರದೇಶಗಳಲ್ಲಿ ಇರುವ ಖಾಲಿ ಹುದ್ದೆ ಬೇಗ ತುಂಬಬೇಕು.
8. ಮುಂಗಡವಾಗಿ ಮೊಟ್ಟೆ, ಬಾಡಿಗೆ, ಗ್ಯಾಸ್, ಕರೆಸ್ಸಿ ಹಣ, ತರಕಾರಿ, ಆಡಳಿತ ವೆಚ್ಚ, ಸಾದಿಲ್ವಾರು ಹಾಕದೇ ಫಲಿತಾಂಶ ಕೇಳಬಾರದು.
9. ಮಾನ್ಯ ಇಲಾಖೆ ಸಚಿವರು ಒಪ್ಪಿಕೊಂಡಂತೆ ಸಾಮೂಹಿಕ ಆರೋಗ್ಯ ವಿಮೆ ಜಾರಿ ಮಾಡಬೇಕು.
10. ಅಂಗನವಾಡಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ಕೊಡಬೇಕು.

11. FRS ಕೈಬಿಡಬೇಕು ಅಂಗನವಾಡಿ ಕೇಂದ್ರಕ್ಕೆ ಗುಣಮಟ್ಟದ ಮೊಬೈಲ್ ನೀಡಬೇಕು ಮತ್ತು WI-FI ನೀಡಬೇಕು.
12. ರಾಜ್ಯ ಸರ್ಕಾರ ಮತ್ತು ಖಾಸಗೀ ವಲಯಗಳಲ್ಲಿ ದುಡಿಯುವ ಮಹಿಳೆಯರಿಗೆ ನೀಡಿರುವ ಮುಟ್ಟಿನ ರಜೆ ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಗೂ ಜಾರಿ ಆಗಬೇಕು.
13. ಅಂಗನವಾಡಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಅನ್ವಯ ಮಾಡಿ ಜಾರಿ ಮಾಡಬೇಕು.
14. ನಿವೃತ್ತರಾದವರಿಗೆ ಇಡಿಗಂಟು ಹೆಚ್ಚಳ ಮಾಡಬೇಕು ಹಾಗೂ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು.
15. IಅಆS ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು.
16. ಮೊಟ್ಟೆ ನೀಡುವ ಬದಲಿಗೆ ನೇರ ನಗದು ಜಮಾವಣೆ ಡಿಬಿಟಿ ತರುತ್ತಿರುವುದನ್ನು ಕೈಬಿಡಬೇಕು.
17. ಬಜೆಟ್ನಲ್ಲಿ ಅಂಗನವಾಡಿ ನೌಕರರಿಗೆ ಗೌರವಧನ ಹೆಚ್ಚಳ ಮಾಡಿಲ್ಲ. ಚುನಾವಣಾ ಸಂದರ್ಭದಲ್ಲಿಯ ಭರವಸೆ ನೀಡದಂತೆ ತಕ್ಷಣ ವೇತನ ಹೆಚ್ಚಳ ಮಾಡಬೇಕು.
ಮೇಲ್ಕಂಡ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ 23ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಅವಧಿಯ ಹೋರಾಟವನ್ನು ನಡೆಸಲಾಗುತ್ತಿದೆ. ಆದ್ದರಿಂದ ಸರ್ಕಾರ ಕೂಡಲೇ ಅಗತ್ಯ ತೆಗೆದುಕೊಳ್ಳಬೇಕೆಂದು ಈ ಮೂಲಕ ಒತ್ತಾಯಿಸುತ್ತೆವೆ ಎಂದು .
ಇದನ್ನೂ ನೋಡಿ: “ಯುಗಾದಿ: ಕಾವ್ಯದಲ್ಲಿ ಮೂಡುವ ಜೀವನದ ನಂಟು” Janashakthi Media
