6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ!

ಹುಬ್ಬಳ್ಳಿ: 6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಹುಬ್ಬಳ್ಳಿಯ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಹಣದ ಸಮೇತ ಸಿಕ್ಕಿ ಬಿದ್ದಿದ್ದಾರೆ.

ಭರತ್ ಹೆಗಡೆ ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಎಂದು ಗುರುತಿಸಲಾಗಿದೆ. ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭರತ್ ಹೆಗಡೆಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ ಕುರಿತು ತಪ್ಪು ನಿರೂಪಣೆ: ಪ್ರಿಯಾಂಕ್ ಖರ್ಗೆ ಕಳವಳ

ಲಾರಿ ಹಗೂ ಪೆಟ್ರೋಲ್ ಬಂಕ್ ಮಾಲೀಕನಿಗೆ 10 ಲಕ್ಷ ರೂ ನೀಡುವಂತೆ ಭರತ್ ಹೆಗಡೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 6 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ನೋಡಿ: ಯುವತಲೆಮಾರಿಗೆ ಕುವೆಂಪು ಓದು; ಸಾಹಿತ್ಯ ಚಿಂತನೆಗಳ ಸಡಗರ Janashakthi Media

Donate Janashakthi Media

Leave a Reply

Your email address will not be published. Required fields are marked *