ಪಾಟ್ನಾ: ಮಾರ್ಚ್ 30ರಂದು MLC ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬಿಹಾರದ ಸುದೀರ್ಘ ಅವಧಿಯ ಸಿಎಂ ಆಗಿರುವ ನಿತೀಶ್ ಕುಮಾರ್ ಕಳೆದ ತಿಂಗಳು ರಾಜ್ಯಸಭೆಗೆ ನೇಮಕವಾಗುವ ಮೂಲಕ ಸಿಎಂ ಸ್ಥಾನವನ್ನು ತ್ಯಜಿಸುವ ಸುಳಿವು ನೀಡಿದ್ದರು.
ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಮರಳಲು ಸಜ್ಜಾಗಿರುವ ನಿತೀಶ್ ಕುಮಾರ್ ಅವರು ಎಷ್ಟು ದಿನಗಳವರೆಗೆ ಮುಂದುವರೆಯಲಿದ್ದಾರೆ ಎಂಬ ಬಗ್ಗೆ ಅನುಮಾನಗಳು ಮುಂದುವರೆದಿತ್ತು.
ಇದನ್ನೂ ಓದಿ: ಜೈಲಿನಲ್ಲಿ ಮೊಬೈಲ್ ಪತ್ತೆ: ಕೈದಿಗಳ ಕುತಂತ್ರಕ್ಕೆ ಅಧಿಕಾರಿಗಳೇ ಶಾಕ್!
ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಮಧ್ಯೆ ಜನತಾದಳ (ಯುನೈಟೆಡ್) ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಜೆಡಿಯು ನಾಯಕ ಅನಿಲ್ ಹೆಗ್ಡೆ ಅವರು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ವಿವರಿಸಿದ ನಂತರ ಈ ವಿಷಯ ತಿಳಿಸಿದರು.
ನಾಮಪತ್ರ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿತ್ತು. ಮಾರ್ಚ್ 23 ರಂದು ಪರಿಶೀಲನೆ ನಡೆಸಲಾಗಿದ್ದು, ನಾಮಪತ್ರ ಹಿಂಪಡೆಯಲು ಇಂದು ಬೆಳಗ್ಗೆ 11 ಗಂಟೆಗೆ ಗಡುವು ನೀಡಲಾಗಿತ್ತು. ಅಂತಿಮವಾಗಿ ನಿತೀಶ್ ಕುಮಾರ್ ಅವರೇ ಸ್ಪರ್ಧೆಯಲ್ಲಿ ಇರುವುದರಿಂದ ಅವಿರೋಧವಾಗಿ ಆಯ್ಕೆಯಾದರು ಎಂದು ಅವರು ಪ್ರಕಟಿಸಿದರು.
ಇದನ್ನೂ ನೋಡಿ: ಉನ್ನತ ಶಿಕ್ಷಣ ‘ಉದ್ಯಮ’ವಾಗುತ್ತಿದೆ: ಬರಗೂರು ರಾಮಚಂದ್ರಪ್ಪ ಟೀಕೆ Janashakthi Media
