ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಲೆ ಏರಿಕೆ, ಇಂಧನ ದರ ಮತ್ತು ಜೀವನ ವೆಚ್ಚಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದೂ, ಜನಸಾಮಾನ್ಯರು ಎದುರಿಸುತ್ತಿರುವ ಸಂಕಷ್ಟಗಳನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದ ನೀತಿಗಳಿಂದ ಜನರ ಮೇಲೆ ಆರ್ಥಿಕ ಭಾರ ಹೆಚ್ಚಾಗಿದೆ ಎಂದು ಆರೋಪಿಸಿದರು. ಯುದ್ಧ
“ಯುದ್ಧಗಳ ನೆಪ, ಕೇಂದ್ರ ಸರ್ಕಾರದ ತಪ್ಪು ನಿರ್ಧಾರ, ನೀತಿಗಳಿಂದಾಗಿ ಇಂದು ದೇಶದ ಜನ ಬೆಲೆ ಏರಿಕೆಯಿಂದ ನರಳುತ್ತಿದ್ದಾರೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾತ್ರವಲ್ಲ, ಟೋಲ್ ಶುಲ್ಕ, ರೈಲ್ವೇ ಟಿಕೆಟ್ ದರ ಎಲ್ಲವೂ ಹೆಚ್ಚಾಗಿದೆ. ಕೆಲವು ಅನಿವಾರ್ಯ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಬೆಲೆ ಏರಿಕೆ ತೀರ್ಮಾನ ಮಾಡಿದಾಗ ಯಾವ ರೀತಿ ಟೀಕೆ ಟಿಪ್ಪಣಿ ಬಂದಿವೆ ಎಂದು ಎಲ್ಲರಿಗೂ ಗೊತ್ತಿದೆ. ಸಾಮಾನ್ಯ ಜನರ ಮೇಲೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಯುದ್ಧ ಮಾಡುತ್ತಿದೆ” ಎಂದರು. ಯುದ್ಧ
ಇದನ್ನೂ ಓದಿ: ಉಪಚುನಾವಣೆ ಪ್ರಚಾರಕ್ಕೆ “ಯಾರೇ ಬಂದರೂ ಸ್ವಾಗತ”: ಬಿ.ಎಸ್ ಯಡಿಯೂರಪ್ಪ
“ಜನರನ್ನ ಕೇಂದ್ರ ಸರ್ಕಾರ ಫೂಲ್ ಮಾಡುತ್ತಿದೆ. ನಾವು ಪಾದಯಾತ್ರೆ ಮಾಡಿದಾಗ ಈ ಬೆಲೆ ಏರಿಕೆ ಸಮಸ್ಯೆಯಿಂದ ಜನರು ಕಂಗೆಟ್ಟಿದ್ದು, ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆ ನೀಡಿ ಅವರಿಗೆ ಶಕ್ತಿ ತುಂಬಿದ್ದೇವೆ. ಈಗ ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕವಾಗಿ ರಕ್ಷಣೆ ನೀಡಿವೆ” ಎಂದು ಹೇಳಿದರು.
ಸಿಮೆಂಟ್, ಕಬ್ಬಿಣ ಬೆಲೆ ಹೆಚ್ಚಳ
“ಸಿಮೆಂಟ್ ಬೆಲೆಯೂ ಸಹ 50 ರಿಂದ 100 ರೂಪಾಯಿಗೆ ಹೆಚ್ಚಳವಾಗಿದೆ. ಇದರ ಹಿಂದೆ ದೊಡ್ಡ ಸಿಮೆಂಟ್ ಮಾಫಿಯಾವೇ ಇದೆ. ಇದನ್ನು ಯಾರು ನಿಯಂತ್ರಣ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಕಬ್ಬಿಣದ ಬೆಲೆ 47 ಸಾವಿರದಿಂದ 59 ಸಾವಿರಕ್ಕೆ ಹೆಚ್ಚಳವಾಗಿದೆ. ಹೀಗಾದರೆ ಜನಸಾಮಾನ್ಯ ಮನೆ ಕಟ್ಟುವುದು ಹೇಗೆ. ಇದಿರಿಂದ ಸರ್ಕಾರದ ಕಾಮಗಾರಿಗಳಿಗೂ ಹಿನ್ನಡೆಯಾಗುತ್ತಿದೆ. ಅಲ್ಲದೇ ಇದ್ದಕ್ಕಿದ್ದಂತೆ ವಿಮಾನ ಪ್ರಯಾಣದರವನ್ನ ಶೇ 18 ರಷ್ಟು ಏರಿಕೆ ಮಾಡಲಾಗಿದೆ” ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಂತೆ ಕೇಂದ್ರ ಪರ್ಯಾಯ ವ್ಯವಸ್ಥೆ ಮಾಡಲಿ
“ಶೇ 34 ರಷ್ಟು ಪೋಸ್ಟಲ್ ಹಾಗೂ ಪಾರ್ಸಲ್ ಚಾರ್ಜ್ ಹೆಚ್ಚಳ ಮಾಡಿದ್ದಾರೆ. ಹೀಗಾದರೆ ಸಾಮಾನ್ಯ ಜನ ಹೇಗೆ ಬದುಕಬೇಕು. ಅಚ್ಚೇದಿನ ಏನಾಯಿತು. ಹೀಗೆ ಮುಂದುವರಿದರೆ ಜನಸಮಾನ್ಯರು ಹೇಗೆ ಬದುಕಬೇಕು. ನಾವು ಗ್ಯಾರಂಟಿ ನೀಡಿದ ಕಾರಣಕ್ಕೆ ಜನ ಸ್ವಲ್ಪ ಉಸಿರಾಡುತ್ತಿದ್ದಾರೆ. ಇದೇ ರೀತಿ ಕೇಂದ್ರ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು. ಜನಸಾಮಾನ್ಯರ ಬವಣೆಯ ಜೊತೆ ಕೇಂದ್ರ ನಿಲ್ಲುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ನೆರವಾಗಬೇಕು ಎಂದು ಆಗ್ರಹಿಸುತ್ತೇವೆ” ಎಂದರು.
“ಮೋದಿ ಸರ್ಕಾರ ಪ್ರತಿನಿತ್ಯ ಜನರ ಜೋಬಿನಿಂದ ಪಿಕ್ ಪಾಕೆಟ್ ಮಾಡುತ್ತಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕೇಂದ್ರ ಸರ್ಕಾರ 900 ಕೋಟಿ ವಸೂಲಿ ಮಾಡಿದೆ. ಕೇಂದ್ರ ಸರ್ಕಾರ ಅದೇ ಹಣ ನಮಗೆ ಕೊಟ್ಟರೆ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಮಾಡಬಹುದು” ಎಂದರು.
ಇದನ್ನೂ ನೋಡಿ: “ಬಸವಣ್ಣರಿಂದ ಕುವೆಂಪುವರೆಗೂ: ಮಾನವೀಯತೆ ಬೆಳೆಸುವ ಕನ್ನಡ ಚಿಂತನೆ” – ಎಲ್ ಎನ್ ಮುಕುಂದರಾಜ್ Janashakthi Media
