ಅಸ್ಸಾಂ| ಭ್ರಷ್ಟಾಚಾರ ಆರೋಪ: ಸಿಎಂ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಗುವಾಹಟಿ: ಅಸ್ಸಾಂನಲ್ಲಿ ಒಂದೇ ಕುಟುಂಬವು ಎಲ್ಲವನ್ನೂ ಲೂಟಿ ಹೊಡೆಯುತ್ತಿದೆ ಎಂದು ಏಪ್ರಿಲ್‌ 1ರಂದು ಅಸ್ಸಾಂನ ನಜೀರಾ ಕ್ಷೇತ್ರದ ಅಭ್ಯರ್ಥಿ ದೇಬಬ್ರತ ಸೈಕಿಯಾ ಪರವಾಗಿ ಪ್ರಚಾರ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸಿಎಂ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಒಂದು ಕುಟುಂಬ ಅಸ್ಸಾಂನಲ್ಲಿ ಎಲ್ಲವನ್ನೂ ಲೂಟಿ ಮಾಡುತ್ತಿದೆ. ಅವರು ಮಾಡದಿದ್ದಾಗ, ಗಣಿ, ಭೂಮಿ ಇತರೆ ಇತರ ಪ್ರತಿಯೊಂದು ಆಸ್ತಿಯನ್ನು ದೊಡ್ಡ ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸಮಸ್ಯೆ ತೀವ್ರ: ರಸ್ತೆ ತಡೆದು ಪ್ರತಿಭಟಿಸಿದ ಸ್ಥಳೀಯರು

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪ್ರತಿಯೊಂದು ರಂಗದಲ್ಲೂ ಭಾರಿ ಭ್ರಷ್ಟಾಚಾರ ನಡೆದಿದೆ. ಶಾರದಾ ಚಿಟ್ ಫಂಡ್, ಸ್ಮಾರ್ಟ್ ಸಿಟಿ ಹಾಗೂ ಎನ್‌ಸಿ ಹಿಲ್ಸ್‌ನಂತಹ ಹಲವಾರು ಹಳೆಯ ಹಗರಣಗಳನ್ನು ಉಲ್ಲೇಖಿಸಿ ಕಿಡಿಕಾರಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆ ಎಂದು ಹೇಳುತ್ತಿದೆ. ವಾಸ್ತವದಲ್ಲಿ ಅದು ಡಬಲ್ ಗುಲಾಮಗಿರಿ ಸರ್ಕಾರ. ಪ್ರಧಾನಿ ಮೋದಿ ಅಮೆರಿಕದ ಗುಲಾಮಗಿರಿಯಲ್ಲಿ ತೊಡಗಿದ್ದಾರೆ ಮತ್ತು ಹಿಮಂತ ಬಿಸ್ವಾ ಶರ್ಮಾ ಮೋದಿಯ ಗುಲಾಮಗಿರಿಯಲ್ಲಿ ತೊಡಗಿದ್ದಾರೆ ಎಂದಿದ್ದಾರೆ.

ಚಹಾ ತೋಟದ ಕಾರ್ಮಿಕರ ದಿನಗೂಲಿ ಹೆಚ್ಚಿಸುವ ಭರವಸೆಯನ್ನು ಈಡೇರಿಸುವಲ್ಲಿ ಬಿಜೆಪಿ ಸರ್ಕಾರದ ವಿಫಲವಾಗಿದೆ. ವಿವಿಧ ಬುಡಕಟ್ಟು ಸಮುದಾಯಗಳು ವರ್ಷಗಳಿಂದ ಎಸ್‌ಟಿ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿವೆ. ಬಿಜೆಪಿ ಅವರಿಗೆ ಎಸ್‌ಟಿ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿತ್ತು, ಆದರೆ ಅವರು ಅದನ್ನು ನೀಡಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ನೋಡಿ: “ವೇದಿಕೆಯ ಬೆಳಕಿನಲ್ಲಿ ಬದುಕಿನ ಕಥೆಗಳು | ವಿಶ್ವ ರಂಗಭೂಮಿ ದಿನ ವಿಶೇಷ” Janashakthi Media

Donate Janashakthi Media

Leave a Reply

Your email address will not be published. Required fields are marked *