ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ದಿನೇದಿನೇ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆ, ಎಲ್‌ಪಿಜಿ ದರ, ಟೋಲ್ ಶುಲ್ಕ ಮತ್ತು ವಿಮಾನ ಪ್ರಯಾಣ ವೆಚ್ಚಗಳ ವಿಚಾರವಾಗಿ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಾಮಾನ್ಯ ಜನರ ಮೇಲಿನ ಆರ್ಥಿಕ ಭಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ತಣ್ಣೀರುಬಾವಿ ಬಡವರ ಭೂಮಿಯ ಹಕ್ಕು ನಿರಾಕರಣೆ ಸಂವಿಧಾನ ಬಾಹಿರ – ಬಿಕೆ ಇಮ್ತಿಯಾಜ್
ವಿಮಾನ ಇಂಧನ ದರ ಏರಿಕೆಯಿಂದ ದೇಶೀಯ ವಿಮಾನ ಟಿಕೆಟ್‌ಗಳ ಬೆಲೆ 10ರಿಂದ 15 ಶೇಕಡಾ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ. ಔಷಧಿ, ಸಿಮೆಂಟ್, ಖಾದ್ಯ ತೈಲ ಮತ್ತು ಗೃಹೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಉಲ್ಲೇಖಿಸಿ, ಜನರ ಜೇಬಿಗೆ ನಿರಂತರ ಹೊಡೆತ ಬೀಳುತ್ತಿದೆ ಎಂದು ಆರೋಪಿಸಲಾಗಿದೆ.
ಈ ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬೆಲೆ ಏರಿಕೆ ವಿಚಾರ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ.
ಇದನ್ನೂ ನೋಡಿ: ಫ್ಯಾಕ್ಟ್ ಚೆಕ್ | ಮೋದಿ–ಸೋನಿಯಾ ಆಸ್ಪತ್ರೆ ಭೇಟಿ: ವೈರಲ್ ಫೋಟೋ ನಿಜವೇ ಅಥವಾ ನಕಲಿಯೇ? Janashakthi Media
