ಬೆಳಗಾವಿ: ತನ್ನ ಪತ್ನಿ ಮತ್ತು ಮಕ್ಕಳನ್ನು ಮನೆಯಲ್ಲೇ ಕೂಡಿ ಹಾಕಿ ಚಿತ್ರಹಿಂಸೆ ನೀಡುತ್ತಿದ್ದ ಪ್ರಕರಣದಲ್ಲಿ ಬೆಳಗಾವಿಯ ಅಕ್ಕಾ ಪಡೆಯು ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತಾಯಿ ಮತ್ತು ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಪತ್ನಿ
ಮಾರ್ಚ್ 3ರಂದು ಬೆಳಗಾವಿಯ ಟಿಳಕವಾಡಿ ಪ್ರದೇಶದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಬೆಡ್ ರೂಮಿನಲ್ಲಿ ಲಾಕ್ ಮಾಡಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೆಹಲಿಯಿಂದ ಫೋನ್ ಕರೆ ಮೂಲಕ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ಬಂದಿತ್ತು.
ಇದನ್ನೂ ಓದಿ: ಎಲ್ಪಿಜಿ ಬಿಕ್ಕಟ್ಟು: ನಗರ ತೊರೆಯುತ್ತಿರುವ ವಲಸೆ ಕಾರ್ಮಿಕರು
ಮಹಿಳೆಯ ಇಚ್ಛೆ ಮತ್ತು ಮುಂದಿನ ಸುರಕ್ಷತೆಯ ದೃಷ್ಟಿಯಿಂದ ಮಹಿಳೆ ಮತ್ತು ಅವರ ಇಬ್ಬರು ಮಕ್ಕಳನ್ನು ಅವರ ತವರು ಮನೆ ಇರುವ ದೆಹಲಿಗೆ ವಿಮಾನದ ಮೂಲಕ ಕಳುಹಿಸಿಕೊಡುವ ಮೂಲಕ ಪೊಲೀಸರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಈ ಕಾರ್ಯಾಚರಣೆಯನ್ನು ಪಿಎಸ್ಐ ಎ ರುಕ್ಮಿಣಿ, ಸಿಬ್ಬಂದಿಗಳಾದ ಆರ್ ಐ ಕಡಲಗಿ, ಸ್ವಪ್ನಾ ಗೊಂದಳಿ, ರೂಪಶ್ರೀ ಯಮಕನಮರಡಿ ಮತ್ತು ಸಿದ್ದಪ್ಪ ಸಾಂಗ್ಲಿ ಅವರೊಂದಿಗೆ ನಡೆಸಲಾಗಿದ್ದು, ಅವರ ಪ್ರಯತ್ನಗಳು ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗುತ್ತಿವೆ.
ಫೆಬ್ರವರಿ 17, 2026 ರಂದು ಪ್ರಾರಂಭವಾದ ‘ಅಕ್ಕ ಪಡೆ’ ಬೆಳಗಾವಿ ನಗರದಲ್ಲಿ ಮಹಿಳಾ ಸುರಕ್ಷತೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದು, ಈಗಾಗಲೇ 70ಕ್ಕೂ ಹೆಚ್ಚು ಶಾಲೆಗಳು, ಕಾಲೇಜುಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದೆ.
ಒಟ್ಟು 91 ಜಾಗೃತಿ ಅಭಿಯಾನಗಳ ಮೂಲಕ ಮಹಿಳಾ ಹಕ್ಕುಗಳು, ಬಾಲ್ಯ ವಿವಾಹ ನಿಷೇಧ, POCSO ಕಾಯ್ದೆ, ಸೈಬರ್ ಅಪರಾಧಗಳು ಮತ್ತು ವೈಯಕ್ತಿಕ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಾಗಿದೆ.
ಇಲ್ಲಿಯವರೆಗೆ ಈ ತಂಡ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದು, ಎಂಟು ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಧ್ಯಸ್ಥಿಕೆ ವಹಿಸಿದೆ. 12 ಘಟನೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ. ಜೊತೆಗೆ, ಕಿರುಕುಳ, ಸಾರ್ವಜನಿಕ ಕಿರಿಕಿರಿ ಮತ್ತು ಅಸಭ್ಯ ವರ್ತನೆಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಅಡಿಯಲ್ಲಿ 55 ಪ್ರಕರಣಗಳನ್ನು ದಾಖಲಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರು ಮಾತನಾಡಿ, ‘ಅಕ್ಕ ಪಡೆ’ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಈ ತಂಡ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಇದನ್ನೂ ನೋಡಿ: ಜನಾರೋಗ್ಯದಲ್ಲಿ ಕೇರಳ ಮಾದರಿ – ಪ್ರಸನ್ನ ಸಾಲಿಗ್ರಾಮ, ಕೆ.ಎಸ್. ವಿಮಲಾ ಮಾತುಕತೆ Janashakthi Media
