ಮಣಿಪುರದಲ್ಲಿ ಬಾಂಬ್ ದಾಳಿ; ಇಬ್ಬರು ಮಕ್ಕಳು ಮೃತ್ಯು

ಇಂಫಾಲ: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮೋಯಿರಾಂಗ್ ಟ್ರೊಂಗ್ಲಾವೊಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರರು ಏಪ್ರಿಲ್‌ 7ರಂದು  ಮಧ್ಯರಾತ್ರಿ 1 ಗಂಟೆಗೆ ಬಾಂಬ್ ಎಸೆದಿದ್ದೂ, ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಘಟನೆಯಲ್ಲಿ 5 ವರ್ಷದ ಬಾಲಕ, ಆರು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನೆಗೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇದು ಅನಾಗರಿಕ ಕೃತ್ಯ” ಮತ್ತು “ಮಾನವೀಯತೆಯ ಮೇಲಿನ ನೇರ ದಾಳಿ” ಎಂದು ಖಂಡಿಸಿದ್ದಾರೆ.

ಇದನ್ನೂ ಓದಿ: ‘ತಿದ್ದುಪಡಿ ಕಾಯ್ದೆ ಹಿಂತೆಗೆದುಕೊಳ್ಳಿ’: ಲಿಂಗತ್ವ ಅಲ್ಪಸಂಖ್ಯಾತರ ಒತ್ತಾಯ

ಅಪರಾಧಿಗಳನ್ನು ಗುರುತಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ದಾಳಿಯ ನಂತರ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೆಟ್ರೋಲ್ ಬಂಕ್ ಬಳಿಯಿದ್ದ ಒಂದು ಟ್ರಕ್‌, ಎರಡು ತೈಲ ಟ್ಯಾಂಕರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ಮೋಯಿರಾಂಗ್ ಪೊಲೀಸ್ ಠಾಣೆಯ ಮುಂದೆ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಪೊಲೀಸ್ ಚೌಕಿಯನ್ನು ಧ್ವಂಸಗೊಳಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳನ್ನು ದೊಡ್ಡ ಪ್ರಮಾಣದಲ್ಲಿ ನಿಯೋಜಿಸಲಾಗಿದ್ದು, ಶಾಂತಿ ಕಾಪಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ನೋಡಿ: ಉರಿಗೌಡ–ನಂಜೇಗೌಡ ಸೃಷ್ಟಿಕರ್ತರಿಗೆ ‘ಹೈದರ್ ಅಲಿ–ಟಿಪ್ಪು ಸುಲ್ತಾನ್’ ಪುಸ್ತಕವೇ ಉತ್ತರ Janashakthi Media

Donate Janashakthi Media

Leave a Reply

Your email address will not be published. Required fields are marked *