ಬೆಂಗಳೂರು: ಏಪ್ರಿಲ್ 10ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಮೂಲಕ ಸರ್ಕಾರಿ ಶಾಲೆ ವಿಲೀನ ವಿರೋಧಿಸಿ ಬೃಹತ್ ಜನ ಸಮಾವೇಶ ಹಮ್ಮಿಕೊಳ್ಳಲಾಗಿದೆ. ವಿಲೀನ
ದೊಡ್ಡಬಳ್ಳಾಪುರದ ಕನ್ನಡ ಜಾಗೃತ ಭವನದಲ್ಲಿ ಬುಧವಾರ ನಡೆದ ನಮ್ಮೂರ ಶಾಲೆ ಉಳಿಸಿ ರಾಜ್ಯಮಟ್ಟದ ಜನ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಲ್ಯಾಣಕುಮಾರ್ ಪ್ರತಿಭಟನೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನೆಪದಲ್ಲಿ ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಜಾರಿಗೊಳಿಸಿದೆ. ಎಲ್ಕೆಜಿ ಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡುವುದಾಗಿ ಹೇಳಲಾಗುತ್ತಿದೆ. ಈ ಮೂಲಕ ಸಾವಿರಾರು ಸರ್ಕಾರಿ ಶಾಲೆ ಮುಚ್ಚುವ ಪ್ರಯತ್ನ ನಡೆಸಲಾಗಿದೆ.
ಗ್ರಾಮ ಪಂಚಾಯಿತಿಗೆ ಒಂದರಂತೆ ಕೇವಲ 6,000 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವುದು ಸರ್ಕಾರದ ಗುರಿಯಾಗಿದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ಜಾರಿಯಾದರೆ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳು ಮುಚ್ಚಲಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ನೋಡಿ: ಇರಾನ್ ಪ್ರತಿರೋಧ – ಯು.ಎಸ್ (ಅಮೆರಿಕ) ಪತನದ ಆರಂಭವೆ? ಡಾ. ಬಿ.ಆರ್. ಮಂಜುನಾಥ್ , ಗುರುರಾಜ ದೇಸಾಯಿ ಮಾತುಕತೆ
