9 ರಾಜ್ಯ – 3 ಯು.ಟಿ ಗಳಲ್ಲಿ ಎಸ್‌ಐಆರ್ ಪೂರ್ಣ; ಮತದಾರರ ಸಂಖ್ಯೆ 6.8 ಕೋಟಿಗೆ ಕುಸಿತ

ಹೊಸದಿಲ್ಲಿ: ಏಪ್ರಿಲ್‌ 10ರಂದು ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್)ಯು 9 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಯು.ಟಿ) ಪೂರ್ಣಗೊಂಡಿದ್ದು, ಒಟ್ಟು ಮತದಾರರ ಸಂಖ್ಯೆ ಸುಮಾರು 6.8 ಕೋಟಿ. ಗಳಷ್ಟು ಕುಗ್ಗಿದೆ.

ಉತ್ತರ ಪ್ರದೇಶದ ಅಂತಿಮ ಮತದಾರರ ಪಟ್ಟಿಯು ಶುಕ್ರವಾರ ಬಿಡುಗಡೆಗೊಳ್ಳುವುದರೊಂದಿಗೆ ಎರಡನೇ ಹಂತದ ಎಸ್‌ಐಆರ್ ಪೂರ್ಣಗೊಂಡಿದೆ.

ಉ. ಪ್ರದೇಶ, ಪ.ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸ್‌ಗಡ, ಕೇರಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಗುಜರಾತ್, ಮಧ್ಯಪ್ರದೇಶ ಮತ್ತು ಗೋವಾಗಳ ಅಂತಿಮ ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗಿದೆ. ಯು.ಟಿ

ಇದನ್ನೂ ಓದಿ: ಚನ್ನರಾಯಪಟ್ಟಣ ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ: ದುಷ್ಕರ್ಮಿಗಳ ಬಂಧನಕ್ಕೆ KPRS ಆಗ್ರಹ

ಕಳೆದ ಕೆಲವು ತಿಂಗಳುಗಳಲ್ಲಿ ಈ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ಆಯೋಗ ಹಂಚಿಕೊಂಡ ಮಾಹಿತಿಗಳ ಪ್ರಕಾರ, ಕಳೆದ ವರ್ಷದ ಅ.27ರಂದು ಎಸ್‌ಐಆರ್ ಪ್ರಕ್ರಿಯೆಯನ್ನು ಘೋಷಿಸಿದಾಗ ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಒಟ್ಟು ಸುಮಾರು 51 ಕೋಟಿ ಮತದಾರರನ್ನು ಹೊಂದಿದ್ದವು. ಎಸ್‌ಐಆರ್ ಬಳಿಕ ಸುಮಾರು 44.92 ಮತದಾರರಿದ್ದು, 6.8 ಕೋಟಿಯಷ್ಟು ಇಳಿಕೆಯಾಗಿದೆ.

ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆದಿತ್ತು.

ಈ ತಿಂಗಳು ಐದು ವಿಧಾನಸಭಾ ಚುನಾವಣೆಗಳ ಬಳಿಕ ಉಳಿದ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭಗೊಳ್ಳುವ ಸಾಧ್ಯತೆಯಿದ್ದು, ಇವು ಒಟ್ಟು 40 ಕೋಟಿ ಮತದಾರರನ್ನು ಹೊಂದಿವೆ.

ಅಸ್ಸಾಂನಲ್ಲಿ ಎಸ್‌ಐಆರ್ ಬದಲಿಗೆ ‘ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ’ ಫೆ.10ರಂದು ಪೂರ್ಣಗೊಂಡಿದೆ.

ಇದನ್ನೂ ನೋಡಿ: 1 ಲಕ್ಷ ಶಿಕ್ಷಕರು ಜನಗಣತಿಗೆ: ಶಿಕ್ಷಣ ವ್ಯವಸ್ಥೆಗೆ ದೊಡ್ಡ ಹೊಡೆತ? Janashakthi Media

Donate Janashakthi Media

Leave a Reply

Your email address will not be published. Required fields are marked *