ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗೆ ಅರ್ಜಿ ಆಹ್ವಾನ

ಧಾರವಾಡ : 2025 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಕನ್ನಡ ಪುಸ್ತಕ ಸೊಗಸು ಬಹುಮಾನ ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೊಗಸು
ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಮೇ 11, 2026 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ವಿಳಾಸಕ್ಕೆ ಸಲ್ಲಿಸಬೇಕು.

ಇದನ್ನೂ ಓದಿ: ಲಕ್ನೋ ಅಗ್ನಿ ದುರಂತ: 280ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮ, 1000ಕ್ಕೂ ಹೆಚ್ಚು ಜನ ನಿರಾಶ್ರಿತ

ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆಯನ್ನು ವೆಬ್ಸೈಟ್ https://kpp.karnataka.gov.in ರಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ನೋಡಿ: SC ಒಳಮೀಸಲಾತಿ| ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಸಿಪಿಐ(ಎಂ) ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *