ಬೆಂಗಳೂರು: ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿ ಚಾಲಕರಿಗೆ ಮತ್ತೊಂದು ಶಾಕ್ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧವಾಗಿದೆ. ಚಾಲಕ
ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ನಿಯಮಾವಳಿ ರೂಪಿಸುವ ಉದ್ದೇಶ ಇಲ್ಲವೆಂದು ತಿಳಿಸಿರುವ ಸರ್ಕಾರ, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ಮುಂದಾಗಿದೆ.
ಇದನ್ನೂ ಓದಿ: ನ್ಯಾಯಾಧೀಶರನ್ನು ಬದಲಿಸಲು ಅಲ್ಲ, ನೆರವಾಗಲು ಎಐ ಬಳಕೆ: ಸಿಜೆಐ ಸೂರ್ಯಕಾಂತ್
ಹೈಕೋರ್ಟ್ ಏಕಸದಸ್ಯ ಪೀಠ ಬೈಕ್ ಟ್ಯಾಕ್ಸಿಗಳನ್ನು ಅನಧಿಕೃತವೆಂದು ಕಳೆದ ವರ್ಷ ಘೋಷಿಸಿ ರಾಜ್ಯದಲ್ಲಿ ನಿಷೇಧಿಸಿತ್ತು. ಆದರೆ ಈ ವರ್ಷದ ಜನವರಿ 23ರಂದು ದ್ವಿಸದಸ್ಯ ಪೀಠವು ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಅಲ್ಲದೇ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ಯೆಲ್ಲೋ ಬೋರ್ಡ್ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡಲು ಸೂಚಿಸಿತ್ತು. ಈ ತೀರ್ಪು ರಾಜ್ಯ ಸರ್ಕಾರದ ನಿಲುವಿಗೆ ವಿರುದ್ಧವಾಗಿರುವುದರಿಂದ, ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.
ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮ ಬೈಕ್ ಟ್ಯಾಕ್ಸಿಯ ವಿಷಯದಲ್ಲಿ ಸರ್ಕಾರದ ನಿಲುವು ಸರಿಯಾದದ್ದೇ ಆಗಿದ್ದು, ಕಾನೂನು ಸ್ಪಷ್ಟತೆ ಅಗತ್ಯವಾಗಿದೆ. ಸಾರಿಗೆ ಇಲಾಖೆ ಈಗಾಗಲೇ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಏಪ್ರಿಲ್ 23ರೊಳಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ ಎಂದು ತಿಳಿಸಿದ್ದಾರೆ.
ಇದನ್ನೂ ನೋಡಿ: ನಿತೀಶ್ ಕುಮಾರ್ ಎಂಬ ನಾನು…!? ಜೆಡಿಯುಗೆ ಇದು ಕೊನೆಯ ಮೊಳೆಯೇ? Janashakthi Media
