ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ವೀಕ್ಷಿಸುವುದು ಹೇಗೆ?

ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಮಾರ್ಚ್ 18ರಿಂದ ಏಪ್ರಿಲ್ 2 ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡ 90ರಷ್ಟು ಫಲಿತಾಂಶ ದಾಖಲಾಗಿದೆ.  ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ರವನಿಸಲಾಗುತ್ತದೆ.
ಇನ್ನು ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದು 625 ಕ್ಕೆ 625 ಅಂಕಗಳನ್ನು ಮೂರು ವಿದ್ಯಾರ್ಥಿಗಳು ಗಳಿಸಿದ್ದಾರೆ. ಬೆಳಗಾವಿಯ ರೂಪ ಚೆನ್ನಗೌಡ ಪಾಟೀಲ್ ಗೆ 625ಕ್ಕೆ 625, ಹಾಸನದ ಜಾನವಿ ಹಾಗೂ ಉತ್ಸವ್ ಪಾಟೀಲ್ 625 ಕ್ಕೆ 625 ಅಂಕಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ರಾಜ್ಯಕ್ಕೆ ಈ ಮೂವರು ಟಾಪರ್ ಗಳಾಗಿ ಹೊರಹೊಮ್ಮಿದ್ದಾರೆ.

ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ವೇಳೆ ಬಾಂಬ್ ದಾಳಿ!

ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ

ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು

ಹಿಂದಿ ಸೇರಿ ತೃತೀಯ ಭಾಷೆಗೆ ಅಂಕ ಅಥವಾ ಗ್ರೇಡ್‌?

ಪ್ರಸಕ್ತ ವರ್ಷದಿಂದಲೇ ಹಿಂದಿ ಸೇರಿ ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್‌ ನೀಡಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಬಗ್ಗೆ ಹೈಕೋರ್ಟ್‌ನಿಂದ ತಡೆ ನೀಡಿದ್ದು, ಗ್ರೇಡ್‌ ಬೇಡ ಅಂಕ ನೀಡಲು ಆದೇಶಿಸಲಾಗಿತ್ತು. ಹೀಗಾಗಿ, ಈ ವರ್ಷ ಅಂಕ ನೀಡಲಾಗುತ್ತಿದೆ.

625 ಅಂಕಗಳಿಗೆ ಫಲಿತಾಂಶ ಪ್ರಕಟವಾಗಲಿದೆ. ತೃತೀಯ ಭಾಷೆ ಪಾಸ್‌ ಆಗುವುದ ಕಡ್ಡಾಯವಾಗಿದೆ. ಮುಂದಿನ ವರ್ಷದಿಂದ ಗ್ರೇಡ್‌ ನಿಯಮವನ್ನು ಜಾರಿಗೆ ತರುವ ಸಾಧ್ಯತೆ ಇದೆ.

ಇದನ್ನೂ ನೋಡಿ: ಡಿಲಿಮಿಟೇಶನ್ ಎನ್ನುವ ಟಿಕ್ ಟಿಕ್ ಬಾಂಬ್.. ಇದು ಸ್ಪೋಟಿಸುವುದೇ? Janashakthi Media

Donate Janashakthi Media

Leave a Reply

Your email address will not be published. Required fields are marked *