ಗರ್ಭಿಣಿಯಾಗಿಸಿ ಮೋಸ ಪ್ರಕರಣ: ‘ಮದುವೆಯೇ ಉತ್ತಮ’ ಎಂದ ಹೈಕೋರ್ಟ್

ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿ ಮಗು ಕರುಣಿಸಿ ಮೋಸಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಸಲಹೆ ನೀಡಿದೆ. ಮೋಸ 

ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿ ಕೃಷ್ನ ಜಿ.ರಾವ್ ನಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಎಸ್​​ಎಸ್​​ಎಲ್​ಸಿ 2ನೇ ಪರೀಕ್ಷೆಗೆ ದಿನಾಂಕ ಘೋಷಣೆ!

ಅಲ್ಲದೇ ಯುವತಿ ಹಾಗೂ ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿ ಕರ್ತವ್ಯ ಎಂದು ತಿಳಿಸಿದೆ.

ಅಲ್ಲದೇ ಯುವತಿಗೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ದರಿದ್ದಾರಾ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಪ್ರಶ್ನಿಸಿದ್ದು, ಇದಕ್ಕೆ ಅಭಿಪ್ರಾಯ ತಿಳಿಸಿ ಎಂದು ಹೇಳಿ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.

ಇದನ್ನೂ ನೋಡಿ: ಬಗೆದಷ್ಟೂ..ಮುಗಿಯದ SIR ಬಗ್ಗಡ : ದೇಶದ ಜನರನ್ನೇ ಪರದೇಶಿಗಳನ್ನಾಗಿಸುತ್ತಿದೆ Janashakthi Media

Donate Janashakthi Media

Leave a Reply

Your email address will not be published. Required fields are marked *