ಪಂಜಾಬ್‌ನಲ್ಲಿ ತನ್ನ ಸರ್ಕಾರವನ್ನು ಉರುಳಿಸಲು ಬಿಜೆಪಿ ಸಂಚು – ಎಎಪಿ ಆರೋಪ

ವದೆಹಲಿ: ಪಂಜಾಬ್‌ನಲ್ಲಿ ತನ್ನ ಸರ್ಕಾರವನ್ನು ಉರುಳಿಸಲು ಕೇಸರಿ ಪಡೆ ಸಂಚು ರೂಪಿಸುತ್ತಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ (ಎಎಪಿ) ಗಂಭೀರ ಆರೋಪ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಎಎಪಿ ನಾಯಕರು, ಪಂಜಾಬ್‌ನ ತಮ್ಮ ಪಕ್ಷದ ಶಾಸಕರಿಗೆ ಬಿಜೆಪಿ ಭಾರಿ ಮೊತ್ತದ ಹಣದ ಆಮಿಷವೊಡ್ಡುತ್ತಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಪ್ರತಿನಿಧಿಗಳು ಕನಿಷ್ಠ 10 ರಿಂದ 12 ಎಎಪಿ ಶಾಸಕರನ್ನು ಸಂಪರ್ಕಿಸಿದ್ದು, ತಲಾ 25 ಕೋಟಿ ರೂಪಾಯಿಗಳ ಆಫರ್ ನೀಡಿದ್ದಾರೆ ಎನ್ನಲಾಗಿದೆ. ತನ್ನ

ಇದನ್ನೂ ಓದಿ: ನಿತೀಶ್ ಕುಮಾರ್ ರನ್ನು ಮುಗಿಸಲು ಬಿಜೆಪಿ ಪ್ರಯತ್ನ: ತೇಜಸ್ವಿ ಯಾದವ್ ಆರೋಪ

ದೆಹಲಿಯಲ್ಲಿ ಅನುಸರಿಸಿದ ‘ಆಪರೇಷನ್ ಕಮಲ’ ಮಾದರಿಯನ್ನೇ ಪಂಜಾಬ್‌ನಲ್ಲೂ ನಡೆಸಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ ಎಂಬುದು ಎಎಪಿ ವಾದ. ಈ ಬೆಳವಣಿಗೆಯಿಂದಾಗಿ ಪಂಜಾಬ್ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಯಾಗಿದೆ.

ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿದ ಬೆನ್ನಲ್ಲೇ ಪಂಜಾಬ್‌ನಲ್ಲಿ ಅಸ್ಥಿರತೆ ಉಂಟುಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆಪ್ ಆರೋಪಿಸಿದೆ.

ಪಂಜಾಬ್ ರಾಜ್ಯದ ಎಎಪಿ ಸರ್ಕಾರದ ಸಚಿವರು ಮತ್ತು ಶಾಸಕರು ಸುದ್ದಿಗೋಷ್ಠಿ ನಡೆಸಿ, ತಮ್ಮ ಪಕ್ಷದ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ನೇರವಾಗಿ ಆರೋಪಿಸಿದ್ದಾರೆ. ಅಲ್ಲದೆ, ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಪ್ರಯತ್ನಗಳಿಗೆ ತಾವು ಮಣಿಯುವುದಿಲ್ಲ ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಸಿದೆ.

ಇದನ್ನೂ ನೋಡಿ: ಕನಿಷ್ಠ ವೇತನಕ್ಕಾಗಿ ಕಾರ್ಮಿಕರ ಹೋರಾಟ – ಸರ್ಕಾರ ಮತ್ತು ಕೈಗಾರಿಕಾ ಮಾಲೀಕರಿಗೆ ಎಚ್ಚರಿಕೆಯ ಗಂಟೆ Janashakthi Media

Donate Janashakthi Media

Leave a Reply

Your email address will not be published. Required fields are marked *