ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ವಿರುದ್ಧ ಮೇ 7ರಂದು ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಖಾಸಗಿ, ಅನುದಾನ ರಹಿತ ಹಾಗೂ ಅನುದಾನಿತ ಶಾಲೆಗಳಲ್ಲಿ ನಡೆಯುತ್ತಿರುವ ಅಕ್ರಮ ಡೊನೇಷನ್ ವಸೂಲಿ ಹಾಗೂ ಶಿಕ್ಷಣ ಹಕ್ಕು ಕಾಯ್ದೆಯ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿ ಮೇ 7 ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಖಾಸಗಿ ಶಾಲೆ

2025-26ನೇ ಶೈಕ್ಷಣಿಕ ವರ್ಷ ಅಂತ್ಯಗೊಂಡು 2026-27ನೇ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿರುವ ಹಿನ್ನೆಲೆ, ಈಗಾಗಲೇ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಖಾಸಗಿ ಶಾಲೆಗಳು ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಹಾಗೂ ಇತರ ಶುಲ್ಕಗಳ ಹೆಸರಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009ರ ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಡೊನೇಷನ್ ಹೆಸರಿನಲ್ಲಿ ಪೋಷಕರಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ.

ಶಿಕ್ಷಣ ಹಕ್ಕು ಕಾಯ್ದೆ-2009ರ ಸೆಕ್ಷನ್ 2(b) ಪ್ರಕಾರ, ಎಲ್ಲಾ ಖಾಸಗಿ ಶಾಲೆಗಳು ತಮ್ಮ ಶುಲ್ಕ ವಿವರಗಳನ್ನು ಶಾಲಾ ಜಾಲತಾಣ, ಸೂಚನಾ ಫಲಕ ಹಾಗೂ ಇಲಾಖೆಯ SATS ಜಾಲತಾಣದಲ್ಲಿ ಪ್ರಕಟಿಸಬೇಕು. ಜೊತೆಗೆ, ಸೆಕ್ಷನ್ 13 ಹಾಗೂ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012 ಪ್ರಕಾರ ಶುಲ್ಕ ವಸೂಲಿ ಹಾಗೂ ದಾಖಲಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಆದರೆ, ಬಹುತೇಕ ಖಾಸಗಿ ಶಾಲೆಗಳು ಈ ನಿಯಮಗಳನ್ನು ಪಾಲಿಸುತ್ತಿಲ್ಲವೆಂದು ಹೇಳಲಾಗಿದೆ.

ಇದನ್ನೂ ಓದಿ : ಡೊನೇಷನ್‌ ಮಾಫೀಯಾಗೆ ಕಡಿವಾಣ ಯಾಕಿಲ್ಲ!

ಈ ಹಿನ್ನೆಲೆ, ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಖಾಸಗಿ ಶಾಲೆಗಳ ದಾಖಲಾತಿ ಪ್ರಕ್ರಿಯೆಯನ್ನು ಪರಿಶೀಲಿಸಬೇಕು. ಜೊತೆಗೆ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರವನ್ನು ರಚಿಸಿ, ನಿಯಮ ಉಲ್ಲಂಘನೆ ಮಾಡುವ ಹಾಗೂ ಡೊನೇಷನ್ ವಸೂಲಿ ಮಾಡುವ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ. ಖಾಸಗಿ ಶಾಲೆ

ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಶಿವಪ್ಪ ಹಾಗೂ ರಾಜ್ಯ ಕಾರ್ಯದರ್ಶಿ ವಿಜಯ್ ಅವರು ಈ ಕುರಿತು ಪ್ರಕಟಣೆ ನೀಡಿ, ಮೇಲ್ಕಂಡ ಬೇಡಿಕೆಗಳನ್ನು ಈಡೇರಿಸಲು ಮೇ 7 ರಂದು ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ : ಖಾಸಗಿ ಶಾಲೆಗಳು ಪಡೆಯುತ್ತಿರುವುದು ಶುಲ್ಕವೋ! ವಸೂಲಿಯೋ!!? Janashakthi Media

Donate Janashakthi Media

Leave a Reply

Your email address will not be published. Required fields are marked *