ಕೋಲ್ಕತ್ತಾ: ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ನೂತನ ವಿಧಾನಸಭೆ ರಚನೆಗೆ ಅಧಿಸೂಚನೆ ಹೊರಡಿಸಿದೆ.
ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದೆ ಹಾಗೂ ನೂತನ ಸರ್ಕಾರ ರಚನೆಗೆ ವೇದಿಕೆ ಸಿದ್ಧಪಡಿಸಬಹುದು ಎಂಬುದನ್ನು ಚುನಾವಣಾ ಆಯೋಗ ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ರವಾನಿಸಿರುವ ಅಧಿಸೂಚನೆ ಹೇಳಿದೆ.
ಇದನ್ನೂ ಓದಿ: ಸರ್ಕಾರದ ಆದೇಶಗಳನ್ನು ಪಾಲಿಸುವಂತೆ ಒತ್ತಾಯಿಸಿ ಪ್ರತಿಭಟನೆ
“ಚುನಾವಣಾ ಆಯೋಗದ ಕಡೆಯಿಂದ ಪಶ್ಚಿಮ ಬಂಗಾಳದಲ್ಲಿ ನೂತನ ವಿಧಾನಸಭೆ ರಚನೆಯ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ನಿಯಮಾವಳಿಗಳ ಅನುಸಾರ ಸರ್ಕಾರ ರಚನೆಗೆ ಮುಂದಿನ ಕ್ರಮಗಳಿಗೆ ಅದು ಚಾಲನೆ ನೀಡಿದೆ” ಎಂದು ಅವರು ಹೇಳಿದ್ದಾರೆ.
ಚುನಾವಣೆಯ ವೇಳೆ ಚುನಾವಣಾ ಆಯೋಗ ಎಲ್ಲ ನಿಯಮಾವಳಿಗಳಿಗೆ ಬದ್ಧವಾಗಿರುವುದನ್ನು ಖಾತರಿಪಡಿಸಿದೆ ಎಂದೂ ಅವರು ತಿಳಿಸಿದ್ದಾರೆ.
294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ 207 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ, 15 ವರ್ಷಗಳ ಟಿಎಂಸಿಯ ನಿರಂತರ ಆಡಳಿತಕ್ಕೆ ಬಿಜೆಪಿ ತೆರೆ ಎಳೆದಿದೆ.
ಇದನ್ನೂ ನೋಡಿ: “(ಲೇಬರ್ ಕೋಡ್ಸ್) ಶ್ರಮ ಸಂಹಿತೆಗಳ ಜಾರಿ: ರಾಜ್ಯಗಳ ಮುಂದಿನ ದಾರಿ ಯಾವುದು?” Janashakthi Media
