ಬಿಹಾರ: ತಮ್ಮ ಸಚಿವ ಸಂಪುಟವನ್ನು ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ವಿಸ್ತರಣೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸೇರಿದಂತೆ ಜೆಡಿಯು- ಬಿಜೆಪಿ ನೇತೃತ್ವದ ಮೈತ್ರಿಕೂಟದ 31 ಶಾಸಕರು ನೂತನ ಸಚಿವರಾಗಿ ಮೇ 7ರಂದು ಪಮಾಣವಚನ ಸ್ವೀಕರಿಸಿದ್ದಾರೆ. ಬಿಹಾರ
ಇದನ್ನೂ ಓದಿ: ಟಿವಿಕೆಗೆ ಕಾಂಗ್ರೆಸ್ ಷರತ್ತು ಬದ್ಧ ಬೆಂಬಲ!
ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.
ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಸಭೆ ಪ್ರವೇಶಿಸಿದ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ 15 ಶಾಸಕರು, ಜೆಡಿಯುನಿಂದ 13 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಏಪ್ರಿಲ್ 15ರಂದು ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಷ್ಟೆ (ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್) ಪ್ರಮಾಣವಚನ ಸ್ವೀಕರಿಸಿದ್ದರು. ಇಂದು ಪ್ರಮಾಣ ವಚನ ಸ್ವೀಕರಿಸಿರುವ ಸಚಿವರಿಗೆ ಇನ್ನಷ್ಟೇ ಖಾತೆ ಹಂಚಿಕೆಯಾಗಬೇಕಿದೆ.
ಇದನ್ನೂ ನೋಡಿ: “(ಲೇಬರ್ ಕೋಡ್ಸ್) ಶ್ರಮ ಸಂಹಿತೆಗಳ ಜಾರಿ: ರಾಜ್ಯಗಳ ಮುಂದಿನ ದಾರಿ ಯಾವುದು?” Janashakthi Media
