ಕೋಲ್ಕತ್ತಾ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಯ್ಕೆಯಾಗಿದ್ದಾರೆ. ರಾಜಧಾನಿ ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು “ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ” ಎಂದು ಘೋಷಿಸಿದರು. ಪಶ್ಚಿಮ
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿಯ ಹೆಸರನ್ನು ಏಕಮತದಿಂದ ಅಂಗೀಕರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಈ ಘೋಷಣೆ ನಡೆದಿದೆ ಎನ್ನಲಾಗಿದೆ. ಮೇ 9ರಂದು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎನ್ಡಿಎ ಆಡಳಿತದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ.
ಸುವೇಂದು ಅಧಿಕಾರಿ ಈ ಬಾರಿ ನಂದಿಗ್ರಾಮ ಮತ್ತು ಭವಾನಿಪುರ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಭವಾನಿಪುರದಲ್ಲಿ ಅವರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಜಯ ಸಾಧಿಸಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಪಶ್ಚಿಮ
ಇದನ್ನೂ ಓದಿ : ಚುನಾವಣಾ ಫಲಿತಾಂಶ | 1967ರ ರಾಜಕೀಯ ಕ್ಷಣ ಮತ್ತೆ ಮರುಕಳಿಸುತ್ತಿದೆಯೇ?
ಇನ್ನು ಸಭೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಎರಡು ಡಿಸಿಎಂ ಹುದ್ದೆ ಸೃಷ್ಟಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಅಸನ್ಸೋಲ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಿಜೆಪಿ ನಾಯಕಿ ಅಗ್ನಿಮಿತ್ರ ಪಾಲ್ ಮತ್ತು ಉತ್ತರ ಬಂಗಾಳದ ಸಿಲಿಗುರಿಯ ವಿಜೇತ ಅಭ್ಯರ್ಥಿ ಶಂಕರ್ ಘೋಷ್ ಅನುಕ್ರಮವಾಗಿ ಮೊದಲ ಮತ್ತು ಎರಡನೇ ಡಿಸಿಎಂ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿಯವರ ನಿಕಟವರ್ತಿಯಾಗಿದ್ದ ಸುವೇಂದು ಅಧಿಕಾರಿ. 2020ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. 2021ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಬಳಿಕ,
2026ರಲ್ಲಿ ನಡೆದ ಚುನಾವಣೆಯಲ್ಲಿ ಭಭಾನಿಪುರ ಮತಕ್ಷೇತ್ರದಿಂದ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಜಯ ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಮಮತಾ ಅವರನ್ನು 15,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.
ಇದನ್ನೂ ನೋಡಿ : ಚುನಾವಣಾ ಫಲಿತಾಂಶ : ಹೆಚ್ಚಾದ ಹಿಂಸಾಚಾರ Janashakthi Media
https://www.youtube.com/watch?v=TM6cR4cmPiM
