ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ‘ಹಿಂದಿನ ಬಿಬಿಎಂಪಿ ಅವಧಿಯಲ್ಲಿ ಸುಲಭ್ ಶೌಚಾಲಯಗಳ ನಿರ್ವಹಣೆ, ದಂಡ ವಸೂಲಿ ಹೆಸರಿನಲ್ಲಿ ದುರುಪಯೋಗ ನಡೆದಿದ್ದು, ಇದನ್ನು ತನಿಖೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ಲೋಕಾಯುಕ್ತ ಹಾಗೂ ಜಿಬಿಎಗೆ ದೂರು ನೀಡಿದೆ. ಬಿಬಿಎಂಪಿ
‘ಸುಲಭ್ ಶೌಚಾಲಯ ನಿರ್ವಹಣೆ ನಡೆಸುತ್ತಿರುವ ಗುತ್ತಿಗೆದಾರರು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದರೂ, ಪಾಲಿಕೆಗೆ ಪಾವತಿಸಬೇಕಾದ ಗುತ್ತಿಗೆ ಮೊತ್ತ ಜಮೆ ಮಾಡದಿರುವುದು, ಅಧಿಕಾರಿಗಳು ಲೆಕ್ಕ ಪರಿಶೋಧಕರಿಗೆ ದಾಖಲೆ ನೀಡದೇ ಕರ್ತವ್ಯಲೋಪ ಎಸಗಿರುವುದು, ಅಕ್ರಮವಾಗಿ ದಂಡ ವಸೂಲಿ ಮಾಡಿರುವುದು 2023-24ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ ಬಹಿರಂಗವಾಗಿದೆ. ಇದರ ಆಧಾರದ ಮೇಲೆ ಈ ದೂರು ಸಲ್ಲಿಸಲಾಗಿದೆ’ ಎಂದು ರಾಜ್ಯ ಜಂಟಿ ಕಾರ್ಯದರ್ಶಿ ಎಲ್.ಜೀವನ್ ತಿಳಿಸಿದ್ದಾರೆ.
ಇದನ್ನೂ ಓದಿ: ಇಂಧನ ಬಳಕೆ ಕಡಿತ ಕರೆ: ಮೋದಿಯ ಸಲಹೆಗೆ ಕಾಂಗ್ರೆಸ್ ತೀವ್ರ ಟೀಕೆ
ರಾಜಾಜಿನಗರದ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಯಾವುದೇ ಅಧಿಕೃತ ದರಪಟ್ಟಿ, ಸುತ್ತೋಲೆಗಳಿಲ್ಲದೆ ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡಿ, ಸರ್ಕಾರದ ಖಾತೆಗೆ ಜಮೆ ಮಾಡದೇ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಚಾಮರಾಜಪೇಟೆ ಸಹಿತ ಹಲವು ಪ್ರದೇಶಗಳಲ್ಲಿ ಸಾರ್ವಜನಿಕ ಆಸ್ತಿಗಳ ನಿರ್ವಹಣೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಬಾಕಿ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ನೋಡಿ: ಪಿಚ್ಚರ್ ಪಯಣ – 172 | ‘ಪ್ಯಾಲೆಸ್ಟೀನ್ 36’ – ಮೊದಲ ರಾಷ್ಟ್ರೀಯ ದಂಗೆಯ ಚಾರಿತ್ರಿಕ ಫಿಲಂ | ಎನ್ ಕೆ. ವಸಂತರಾಜ್
