ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಮ್ಮ ಸಹೋದರ ಪ್ರತೀಕ್ ಯಾದವ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಇದು ಅತ್ಯಂತ ಹೃದಯವಿದ್ರಾವಕ ಘಟನೆ” ಎಂದು ಅವರು ಹೇಳಿದ್ದಾರೆ. ಇದು
ಮುಲಾಯಂ ಸಿಂಗ್ ಯಾದವ್ ಅವರ ಪುತ್ರರಾಗಿದ್ದ (ಎರಡನೇ ಪತ್ನಿಯ ಮಗ) ಪ್ರತೀಕ್ ಯಾದವ್ ಅವರು ಬುಧವಾರ ಲಖ್ನೋದಲ್ಲಿ ನಿಧನರಾದರು. ಅವರಿಗೆ 38 ವರ್ಷ ವಯಸ್ಸಾಗಿತ್ತು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಅಖಿಲೇಶ್ ಯಾದವ್, “ಪ್ರತೀಕ್ ಬಾಲ್ಯದಿಂದಲೇ ಆರೋಗ್ಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ತಮ್ಮ ಶ್ರಮದ ಮೂಲಕ ಜೀವನದಲ್ಲಿ ಮುಂದೆ ಬರಬೇಕೆಂಬ ಆಸೆ ಅವರಲ್ಲಿತ್ತು. ಅವರ ಅಗಲಿಕೆ ನಮಗೆ ಅಪಾರ ದುಃಖ ತಂದಿದೆ” ಎಂದು ಹೇಳಿದ್ದಾರೆ
ಇದನ್ನೂ ಓದಿ: ವಿದ್ಯುತ್ ಬಿಲ್ ಬಾಕಿ: 8 ತಿಂಗಳಿಂದ ಕತ್ತಲಲ್ಲಿ ಕಚೇರಿ ಕಾರ್ಯಾಚರಣೆ
ಪ್ರತೀಕ್ ಯಾದವ್ ರಾಜಕೀಯದಿಂದ ದೂರ ಉಳಿದಿದ್ದರೂ ಫಿಟ್ನೆಸ್ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು. ಲಖ್ನೋದಲ್ಲಿ ಜಿಮ್ ನಡೆಸುತ್ತಿದ್ದ ಅವರು ಪ್ರಾಣಿ ಸಂರಕ್ಷಣಾ ಚಟುವಟಿಕೆಗಳಲ್ಲಿಯೂ ಸಕ್ರಿಯರಾಗಿದ್ದರು.
ಪ್ರತೀಕ್ ಯಾದವ್ ನಿಧನದ ಹಿನ್ನೆಲೆ ಉತ್ತರ ಪ್ರದೇಶದಲ್ಲಿ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದು, ಕೆಲವು ರಾಜಕೀಯ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.
ಇದನ್ನೂ ನೋಡಿ: ಯುದ್ಧದಲ್ಲಿ ಸೋತ ಯು.ಎಸ್ ನ್ನು ಮಾತುಕತೆಯಲ್ಲಿ ಗೆಲ್ಲಲು ಬಿಡದ ಇರಾನ್ Janashakthi Media
