ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ: ಪರಿಷ್ಕೃತ ದರ ಇಂದಿನಿಂದಲೇ ಜಾರಿ

Please follow and like us:
ನವದೆಹಲಿ: ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹3 ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬರಲಿದೆ.

ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹94.77 ನಿಂದ ₹97.77ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ ₹87.67 ನಿಂದ ₹90.67ಕ್ಕೆ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ರೂ.94.77ರಿಂದ ರೂ.97.77ಕ್ಕೆ ಏರಿಕೆಯಾದರೆ, ಡೀಸೆಲ್ ದರವು ರೂ.89.67ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸಂಸ್ಥೆಗಳು ಹೊಸ ದರ ಜಾರಿಗೆ ತಂದಿವೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಸಂಘರ್ಷ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರೀ ಅಸ್ಥಿರತೆ ಉಂಟು ಮಾಡಿದೆ.

ತೈಲ ಉತ್ಪಾದನೆ ಮತ್ತು ಸಾಗಣೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಭಾರತ ಆಮದು ಮಾಡುವ ಕಚ್ಚಾ ತೈಲದ ಸರಾಸರಿ ಬೆಲೆ ಫೆಬ್ರವರಿಯಲ್ಲಿ ಬ್ಯಾರೆಲ್‌ಗೆ ಸುಮಾರು 69 ಡಾಲರ್ ಇದ್ದರೆ, ಯುದ್ಧ ಆರಂಭವಾದ ಬಳಿಕ ಅದು 113–114 ಡಾಲರ್ ಮಟ್ಟಕ್ಕೇರಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ ಕಳೆದ 11 ವಾರಗಳಿಂದ ದೇಶೀಯ ಇಂಧನ ದರವನ್ನು ತೈಲ ಕಂಪನಿಗಳು ಸ್ಥಿರವಾಗಿಯೇ ಉಳಿಸಿಕೊಂಡಿದ್ದವು. ಆದರೆ, ನಿರಂತರ ನಷ್ಟ ಮತ್ತು ಹೆಚ್ಚುತ್ತಿರುವ ಕಾರ್ಯಾಚರಣಾ ವೆಚ್ಚದಿಂದ ಇದೀಗ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಮೂಲಗಳು ಹೇಳಿವೆ.

ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚುವ ಸಾಧ್ಯತೆ ಇದ್ದು, ತರಕಾರಿ, ಹಣ್ಣು, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

ಖಾಸಗಿ ವಾಹನ ಸವಾರರು, ಟ್ಯಾಕ್ಸಿ ಚಾಲಕರು, ಲಾರಿ ಮಾಲೀಕರು ಮತ್ತು ಸಾರ್ವಜನಿಕ ಸಾರಿಗೆ ಕ್ಷೇತ್ರಕ್ಕೂ ಈ ದರ ಏರಿಕೆ ಹೆಚ್ಚುವರಿ ಹೊರೆ ತರಲಿದೆ.

ತಜ್ಞರ ಅಭಿಪ್ರಾಯದಂತೆ ಮಧ್ಯಪ್ರಾಚ್ಯ ಸಂಘರ್ಷ ಇನ್ನಷ್ಟು ತೀವ್ರಗೊಂಡರೆ ಜಾಗತಿಕ ಕಚ್ಚಾ ತೈಲ ಬೆಲೆ ಮತ್ತಷ್ಟು ಏರಿಕೆಯಾಗಬಹುದು. ಅದರ ಪರಿಣಾಮವಾಗಿ ಭಾರತದಲ್ಲೂ ಇಂಧನ ದರ ಮತ್ತೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

 

Please follow and like us:
Donate Janashakthi Media

Leave a Reply

Your email address will not be published. Required fields are marked *