ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಸಾಮಾನ್ಯ ಜನರ ಬದುಕಿನ ಮೇಲೆ ನೇರ ದಾಳಿ : ಸಿದ್ದರಾಮಯ್ಯ

ಬೆಂಗಳೂರು : ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂಧನ ದರ ಹೆಚ್ಚಳವು ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೆಟ್ರೋಲ್‌-ಡೀಸೆಲ್‌ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಳವಾಗಲಿದ್ದು, ಅದರ ಪರಿಣಾಮವಾಗಿ ಆಹಾರ ಪದಾರ್ಥ ಸೇರಿದಂತೆ ಇತರೆ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ ಎಂದರು. ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಮತ್ತಷ್ಟು ಹೊರೆ ಹಾಕುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ : ಇಂಧನ ದರ ಏರಿಕೆ : ಜನರ ಜೇಬಿಗೆ ಮತ್ತೊಂದು ಹೊರೆ?

ಜಾಗತಿಕ ಮಾರುಕಟ್ಟೆಯ ಅಸ್ಥಿರತೆ ಹಾಗೂ ಪಶ್ಚಿಮ ಏಷ್ಯಾದ ಯುದ್ಧದ ಪರಿಣಾಮ ಇಂಧನ ಕ್ಷೇತ್ರದ ಮೇಲೆ ಒತ್ತಡ ಉಂಟಾಗಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿರುವುದನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ಇದರ ಸಂಪೂರ್ಣ ಹೊರೆ ಜನರ ಮೇಲೆ ಹಾಕಬಾರದು ಎಂದು ಆಗ್ರಹಿಸಿದರು. ದರ ಏರಿಕೆ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ದೇಶಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರ್‌ಗೆ ಸುಮಾರು ಮೂರು ರೂಪಾಯಿ ಹೆಚ್ಚಿಸಲಾಗಿದ್ದು, ಇದು ನಾಲ್ಕು ವರ್ಷಗಳ ಬಳಿಕದ ಪ್ರಮುಖ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ತೈಲ ಕಂಪನಿಗಳು ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯ ಒತ್ತಡವನ್ನು ಉಲ್ಲೇಖಿಸಿವೆ.

Donate Janashakthi Media

Leave a Reply

Your email address will not be published. Required fields are marked *