ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬದಲಾಯಿಸುವ ಅವಶ್ಯಕತೆ ಎದುರಾದರೆ, ಆ ಸ್ಥಾನಕ್ಕೆ ಅರ್ಹರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತ್ರ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಬದಲಾವಣೆ
ಮೇ 16ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದು, ಮೇ 30ರೊಳಗೆ ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಅಥವಾ ವಿಸ್ತರಣೆ ಸಾಧ್ಯ” ಎಂದರು. ಬದಲಾವಣೆ
“ನನ್ನ ಅಭಿಪ್ರಾಯದಲ್ಲಿ ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಪದೇಪದೇ ಬದಲಿಸುವುದು ಸರಿಯಲ್ಲ. ಸಚಿವ ಸಂಪುಟ ಪುನರ್‌ರಚನೆಯಾದರೆ ಉಳಿದಿರುವ ಎರಡು ವರ್ಷಗಳಲ್ಲಿ ಜನರಿಗೆ ಪರಿಣಾಮಕಾರಿ ಆಡಳಿತ ನೀಡಬಹುದು. ನಮ್ಮ ದೋಷಗಳನ್ನು ಸರಿಪಡಿಸಿಕೊಂಡು 2028ರಲ್ಲೂ ಮತ್ತೆ ಅಧಿಕಾರಕ್ಕೆ ಬರಬಹುದು” ಎಂದು ಅವರು ಹೇಳಿದರು.
ಇದನ್ನೂ ಓದಿ: ಸಿಬ್ಬಂದಿಗಳಿಗೆ 11 ತಿಂಗಳ ವೇತನ ಬಾಕಿ ಜಮಾ ಮಾಡಿದ BMTC
“ಮುಂದಿನ ಚುನಾವಣೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಎದುರಿಸುತ್ತೇವೆ. ಸಿದ್ದರಾಮಯ್ಯ ಅವರಂತೆ ಆಡಳಿತಾನುಭವ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಬೇಕು” ಎಂದು ಅಭಿಪ್ರಾಯಪಟ್ಟರು.
ತಮ್ಮಿಗೆ ಸಚಿವ ಸ್ಥಾನ ಕೇಳಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಯಾವುದೇ ಹುದ್ದೆ ಕೇಳಿಲ್ಲ” ಎಂದು ಸ್ಪಷ್ಟಪಡಿಸಿದರು.
“ಪಶ್ಚಿಮ ಏಷ್ಯಾದ ಯುದ್ಧದ ನೆಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ. ದೇಶದ ರೂಪಾಯಿ ಮೌಲ್ಯ ಕುಸಿದಿದ್ದು, ಮೋದಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅವರು ರಾಜೀನಾಮೆ ನೀಡಬೇಕು. ಆರ್ಥಿಕ ತಜ್ಞರು ಪ್ರಧಾನಿಯಾಗಬೇಕು” ಎಂದು ಅವರು ಟೀಕಿಸಿದರು.
ಇದನ್ನೂ ನೋಡಿ: ಯುದ್ಧದಲ್ಲಿ ಸೋತ ಯು.ಎಸ್ ನ್ನು ಮಾತುಕತೆಯಲ್ಲಿ ಗೆಲ್ಲಲು ಬಿಡದ ಇರಾನ್ Janashakthi Media
