ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್ರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಮುಂದಿನ ಹದಿನೈದು ದಿನಗಳಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಶಾಸಕ ಬೇಲೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ. ಸಚಿವ ಸ್ಥಾನಕ್ಕಾಗಿ ತಮ್ಮ ಹೋರಾಟ “ಮಾಡೋ ಇಲ್ಲವೇ ಮಡಿಯೋ” ಹಂತಕ್ಕೆ ತಲುಪಿದೆ ಎಂದೂ ಅವರು ಹೇಳಿದ್ದಾರೆ. ಸಚಿವ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಎರಡು ವರ್ಷಾರ್ಧ ಪೂರ್ಣಗೊಂಡಾಗಲೇ ಸಚಿವ ಸಂಪುಟ ಪುನರ್ರಚನೆ ಆಗಬೇಕಿತ್ತು. ಆದರೆ ಇದುವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಇದನ್ನೂ ಓದಿ : ಮೇ 25 | ಫ್ರೀಡಂ ಪಾರ್ಕ್ನಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ಅನಿರ್ದಿಷ್ಟಾವಧಿ ಮುಷ್ಕರ
ಪಕ್ಷದ ಹಲವು ಶಾಸಕರು ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದು, ಹೈಕಮಾಂಡ್ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದರೆ ಅಸಮಾಧಾನ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಕೆ ನೀಡಿದರು. ಸಚಿವ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ರಚನೆ ಕುರಿತ ಚರ್ಚೆಗಳು ಕಳೆದ ಕೆಲವು ವಾರಗಳಿಂದ ಜೋರಾಗಿವೆ. ಕೆಲ ಶಾಸಕರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯೂ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಸಚಿವ
ಇದನ್ನೂ ನೋಡಿ : ಧರ್ಮದ ಮುಸುಕಿನಲ್ಲಿ ಅಧರ್ಮ – ನಟ ಕಿಶೋರ್ ಜೊತೆ ಬಾತ್ ಚೀತ್ Janashakthi Media
