ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಹೈಕಮಾಂಡ್ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಿಢೀರ್ ಬುಲಾವ್ ಬಂದಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ.
ಇದನ್ನೂ ಓದಿ: ಜಿಬಿಎ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಆಸನ ಹಂಚಿಕೆ ಸವಾಲು
ಈ ಹೈಪ್ರೊಫೈಲ್ ಸಭೆಯಲ್ಲಿ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಭಾಗಿಯಾಗುವ ಸಾಧ್ಯತೆ ದಟ್ಟವಾಗಿದೆ. ಲೋಕಸಭೆ ಚುನಾವಣೆಗಳ ನಂತರದ ರಾಜಕೀಯ ಪರಿಸ್ಥಿತಿ ಹಾಗೂ ರಾಜ್ಯ ಸರ್ಕಾರದ ಆಡಳಿತಾತ್ಮಕ ವಿಷಯಗಳ ಬಗ್ಗೆ ಸಭೆಯಲ್ಲಿ ಪರಾಮರ್ಶೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಸಂಪುಟ ಪುನಾರಚನೆ ಕಸರತ್ತು?
ಈ ಇಡೀ ದೆಹಲಿ ಪ್ರವಾಸದ ಪ್ರಮುಖ ಆಕರ್ಷಣೆ ಎಂದರೆ ರಾಜ್ಯ ಸಚಿವ ಸಂಪುಟ ಪುನಾರಚನೆ. ಹೈಕಮಾಂಡ್ ನಾಯಕರೊಂದಿಗಿನ ಭೇಟಿಯ ವೇಳೆ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಅಥವಾ ಬದಲಾವಣೆ ಕುರಿತು ಪ್ರಸ್ತಾಪಿಸುವ ಸಾಧ್ಯತೆ ಇದೆ.
ಕೆಲವು ಸಚಿವರ ಕಾರ್ಯವೈಖರಿ ಬದಲಾವಣೆ ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಈ ಸಭೆಯಲ್ಲಿ ಅಂತಿಮ ತೀರ್ಮಾನ ಹೊರಬೀಳುವ ನಿರೀಕ್ಷೆಯಿದೆ.
ಇದನ್ನೂ ನೋಡಿ: ಗ್ರಾಮದ ನೀರು ವ್ಯವಸ್ಥೆ ಹೊತ್ತವರ ಬದುಕೇ ಅಸ್ಥಿರ; ನೀರಗಂಟಿಗಳ ಸಂಕಷ್ಟ Janashakthi Media
