ತ್ರಿಪುರಾ | ಬಿಜೆಪಿ ಸರ್ಕಾರ ಹೇಳಿದ್ದೊಂದು, ಮಾಡುತ್ತಿರುವುದು ಮತ್ತೊಂದು: ಎಸ್‌ಎಫ್‌ಐ ಟೀಕೆ

ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಭರವಸೆಗಳನ್ನು ನೀಡಿತ್ತು. ಆದರೆ ಆಡಳಿತಕ್ಕೆ ಬಂದ ನಂತರ ಹೇಳಿದ್ದಕ್ಕೆ ವಿರುದ್ಧವಾದ ನೀತಿಗಳನ್ನು ಜಾರಿಗೊಳಿಸುತ್ತಿದೆ ಎಂದು ತ್ರಿಪುರಾ ರಾಜ್ಯ ಎಸ್‌ಎಫ್‌ಐ ಕಾರ್ಯದರ್ಶಿ ಸೃಜನ ದೇವ್ ಆರೋಪಿಸಿದ್ದಾರೆ. ತ್ರಿಪುರಾ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾಜ್ಯೋತಿ ಯೋಜನೆ’ ಮೂಲಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಖಾಸಗಿ ಶಿಕ್ಷಣಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದರು. ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಕೈಗೆಟುಕದಂತಾಗಿದೆ ಎಂದು ಟೀಕಿಸಿದರು.

ಬಿಜೆಪಿ ಸರ್ಕಾರ ವರ್ಷಕ್ಕೆ 50 ಸಾವಿರ ಉದ್ಯೋಗ ನೀಡುವುದಾಗಿ ಹೇಳಿದ್ದರೂ, ಪ್ರಸ್ತುತ ತ್ರಿಪುರಾದಲ್ಲೇ ಸಾವಿರಾರು ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ಅವರು ಹೇಳಿದರು. ಉದ್ಯೋಗಕ್ಕಾಗಿ ಯುವಕರು ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅನೇಕರು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ದೂರಿದರು. ತ್ರಿಪುರಾ

ಇದನ್ನೂ ಓದಿ : ಹತ್ರಾಸ್ ಪ್ರಕರಣ ಆಧಾರಿತ ‘ಹತ್ರಾಸ್ 16 ಡೇಸ್’ ಡಾಕ್ಯುಮೆಂಟರಿ ಸರಣಿ ಬಿಡುಗಡೆ

ತ್ರಿಪುರಾದಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳು 2017ರ ನಂತರ ನಡೆದಿಲ್ಲ ಎಂದು ಸೃಜನ ದೇವ್ ಹೇಳಿದರು. ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ ನಡೆಸುವ ಭರವಸೆ ನೀಡುತ್ತಿರುವ ಬಿಜೆಪಿ, ತ್ರಿಪುರಾದಲ್ಲಿ ಅದನ್ನು ಜಾರಿಗೆ ತರದೇ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಪರಿಸ್ಥಿತಿ ಹದಗೆಟ್ಟಿದ್ದು, ಸುಮಾರು 350 ಶಾಲೆಗಳಲ್ಲಿ ಕೇವಲ ಒಬ್ಬ ಶಿಕ್ಷಕರೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇದರಿಂದ ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಉಳಿಸಲು ಎಸ್‌ಎಫ್‌ಐ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಸಂಘಟಿಸುತ್ತಿದೆ ಎಂದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿದ್ಯಾರ್ಥಿಗಳ ನಡುವೆ ಧಾರ್ಮಿಕ ಹಾಗೂ ಸಾಮಾಜಿಕ ವಿಭಜನೆ ಉಂಟುಮಾಡಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ ಸೃಜನ ದೇವ್, ಇದಕ್ಕೆ ವಿರುದ್ಧವಾಗಿ ತ್ರಿಪುರಾದಲ್ಲಿ ಹೋರಾಟ ಮುಂದುವರಿದಿದೆ ಎಂದು ಹೇಳಿದರು. ಪಶ್ಚಿಮ ಬಂಗಾಳದ ಜನರೂ ಬಿಜೆಪಿಯ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಕರೆ ನೀಡಿದರು. ತ್ರಿಪುರಾ

ಇದನ್ನೂ ನೋಡಿ : ಹಾಸ್ಟೆಲ್‌ ನೌಕರರ ಕಣ್ಣೀರ ಕಥೆ | ಬೆಂಗಳೂರಿನಲ್ಲಿ ಸಾವಿರಾರು ಜನರ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *