ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಯಲ್ಲಿ ಮಹತ್ವದ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭವಾಗಿದೆ. ಮೀಟಿಂಗ್

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆಯಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 28ರಂದೇ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಉಪಾಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ರಾಮಲಿಂಗ ರೆಡ್ಡಿ, ಡಾ.ಎಚ್. ಸಿ. ಮಹದೇವಪ್ಪ ಸೇರಿದಂತೆ ಹಲವು ಮಂದಿ ಬ್ರೇಕ್‌ ಫಾಸ್ಟ್‌ ಸಭೆಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌ : ಬಾಂಗ್ಲಾಕ್ಕೆ ಹೊರಟರೇ ಅಕ್ರಮ ವಲಸೆಗಾರರು? – ಜನಶಕ್ತಿ ಮೀಡಿಯಾ ಪರಿಶೀಲನೆ

ಡಿಸಿಎಂ ಆಗಮನದ ವೇಳೆ ಸಿದ್ದರಾಮಯ್ಯ ಬೆಂಬಲಿಗರ ಸಿದ್ದರಾಮಯ್ಯಗೆ ಜೈಕಾರ ಹಾಕಿದ್ದು, 5 ವರ್ಷ ಸಿದ್ದು ಸಿಎಂ ಎಂದು ಘೋಷಣೆ ಕೂಗಿ ಡಿ.ಕೆ.ಶಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಭಾರೀ ಬಿಗಿ ಪೊಲೀಸ್ ಭದ್ರತಾ ವ್ಯವಸ್ಥೆಗಳ ನಡುವೆ ಬ್ರೇಕ್ ಫಾಸ್ಟ್ ಮಿಟಿಂಗ್ ಆರಂಭವಾಗಿದ್ದು, ನಾಲ್ಕೈದು ತಿಂಗಳ ನಾಯಕತ್ವದ ಗೊಂದಲಕ್ಕೆ ತೆರೆ ಬಿಳಲಿದೆ ಎಂಬ ಕುತೂಹಲ ಸೃಷ್ಟಿಸಿದೆ.

ಈ ಮಧ್ಯೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಬೇರೆ ಕಾರ್ಯ ನಿಮಿತ್ತ ಮುಂಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದ್ದು, ರಾಜ್ಯದಲ್ಲಿನ ಬೆಳವಣಿಗೆಗಳು ನಾಟಕೀಯ ಘಟನೆಗಳಿಗೆ ಸಾಕ್ಷಿಯಾಗಿದೆ.

ಇದನ್ನೂ ನೋಡಿ: ಸಿಎಂ ಸಿದ್ದರಾಮಯ್ಯನವರು ಆಯೋಜಿಸಿದ್ದಉಪಾಹಾರ ಕೂಟಕ್ಕೆ ಕಾವೇರಿಗೆ ಬಂದ ಡಿ.ಕೆ‌. ಶಿವಕುಮಾರ್

Donate Janashakthi Media

Leave a Reply

Your email address will not be published. Required fields are marked *