ನಾಯಕತ್ವ ಬದಲಾವಣೆ ಬೆನ್ನಲ್ಲೆ ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಕ್ಲೈಮಾಕ್ಸ್ ಹಂತದ ಸಂದರ್ಭದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸ್ವೀಕರಿಸಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ್ ಅವರು ಸಲ್ಲಿಸಿದ ವರದಿಯನ್ನು ಸ್ವೀಕರಿಸಿದರು. ನಾಯಕತ್ವ

ಈ ಹಿಂದೆ ಜಯಪ್ರಕಾಶ್ ಹೆಗ್ಡೆ ಅವರು ಅವರು ವರದಿ ಸಲ್ಲಿಕೆ ಮಾಡಿದ್ದರು. ಆದರೆ, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ವರದಿ ಅವೈಜ್ಞಾನಿಕವಾಗಿದೆ ಎಂದು ಆರೋಪ ಮಾಡಲಾಗಿತ್ತು. ಅಲ್ಲದೆ, ಪ್ರಭಾವಿ ಸಮುದಾಯಗಳ ಸ್ವಾಮೀಜಿಗಳು ವರದಿಗೆ ವಿರೋಧ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮರು ಸಮೀಕ್ಷೆಗೆ ಆದೇಶ ಮಾಡಲಾಗಿತ್ತು. ಇದೀಗ ಸಮೀಕ್ಷೆಯ ವರದಿಯನ್ನು ಸ್ವೀಕರಿಸಲಾಗಿದೆ. ನಾಯಕತ್ವ

ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂಬ ಸಂದರ್ಭದಲ್ಲಿ ಅವರು ವರದಿ ಸ್ವೀಕಾರ ಮಾಡುವ ಮೂಲಕ ಅಹಿಂದ ವರ್ಗಕ್ಕೆ ಸಂದೇಶ ರವಾನೆ ಮಾಡಿದ್ದಾರೆ. ಆದರೆ, ಈ ವರದಿಯನ್ನು ಎಷ್ಟರ ಮಟ್ಟಿಗೆ ಜಾರಿಗೆ ತರಲಾಗುತ್ತದೆ ಎಂಬುವುದು ಸದ್ಯದ ಕುತೂಹಲವಾಗಿದೆ. ನಾಯಕತ್ವ

ಇದನ್ನೂ ಓದಿ: ನಗರ ಮೂಲಸೌಕರ್ಯ ಅಭಿವೃದ್ಧಿಗೆ ರಾಷ್ಟ್ರೀಯ ಸಾರ್ವಜನಿಕ ಕಾಮಗಾರಿಗಳ ಪರಿಷತ್ ಸ್ಥಾಪನೆ

2013-2018ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ, ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷರಾಗಿದ್ದ ಎಚ್. ಕಾಂತರಾಜ್ ಅವರ ನೇತೃತ್ವದಲ್ಲಿ ಈ ಸಮೀಕ್ಷೆ ನಡೆಸಲಾಗಿತ್ತು. ಇದಕ್ಕೆ ಜಾತಿ ಸಮೀಕ್ಷೆ ಎನ್ನುವ ಬದಲಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ. 2015 ರಲ್ಲಿ ರಾಜ್ಯಾದ್ಯಂತ ಸಮೀಕ್ಷೆಯನ್ನು ಕೈಗೊಳ್ಳಲಾಗಿತ್ತು. ನಾಯಕತ್ವ

ಈ ಸಮೀಕ್ಷೆಯಲ್ಲಿ ಸುಮಾರು 1.3 ಲಕ್ಷ ಸರ್ಕಾರಿ ಸಿಬ್ಬಂದಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಿದ್ದರು. ರಾಜ್ಯ ಸರ್ಕಾರ ಈ ಸಮೀಕ್ಷೆಗೆ ಅಂದಾಜು ₹160 ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಿತ್ತು. ಆದರೆ, ಕಾಂತರಾಜ್ ಆಯೋಗ ಸಿದ್ಧಪಡಿಸಿದ್ದ ವರದಿಯನ್ನು ನಂತರದಲ್ಲಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಸ್ವೀಕರಿಸಿಲ್ಲ. ಬಳಿಕ ಬಂದ ಬಿಜೆಪಿ ಸರ್ಕಾರ ಕೂಡಾ ವರದಿ ಸ್ವೀಕರಿಸಿರಲಿಲ್ಲ.

2023 ರಲ್ಲಿ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆದ ಸಂದರ್ಭದಲ್ಲಿ, ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜ್ ವರದಿಯ ದತ್ತಾಂಶಗಳನ್ನು ಆಧರಿಸಿ, ಪರಿಷ್ಕೃತ ಅಂತಿಮ ವರದಿಯನ್ನು ಸಿದ್ದಪಡಿಸಿದ್ದರು. ಈ ವರದಿಯನ್ನು ಫೆಬ್ರವರಿ 29, 2024 ರಂದು ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು.

ಈ ವರದಿ ಸೋರಿಯಲ್ಲಿ ಬಹಿರಂಗಗೊಂಡ ಮಾಹಿತಿ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಬಳಿಕ ಮುಸ್ಲಿಮರು ಜನಸಂಖ್ಯೆ ಎರಡನೇ ದೊಡ್ಡ ಸಮುದಾಯವಾಗಿ ಹೊರಹೊಮ್ಮಿದ್ದಾರೆ ಎನ್ನಲಾಗಿತ್ತು. ಅಲ್ಲದೆ, ಹಿಂದುಳಿದ ವರ್ಗಗಳು, ಕುರುಬ ಹಾಗೂ ಈಡಿಗ ಸೇರಿದಂತೆ ಇತರ ಹಿಂದುಳಿದ ವರ್ಗಗಳ ಜನಸಂಖ್ಯೆಯೂ ಗಣನೀಯವಾಗಿದೆ ಎಂಬ ಅಂಶಗಳಿದ್ದವು.

ರಾಜ್ಯದಲ್ಲಿರುವ ಪ್ರತಿಯೊಂದು ಜಾತಿಯ ನಿಖರವಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯ ಬಗ್ಗೆ ಬೆಳಕು ಚೆಲ್ಲುವುದು ಈ ವರದಿಯ ಉದ್ದೇಶವಾಗಿದೆ. ಅಲ್ಲದೆ, ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ವಂಚಿತರಾದ ತಳ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವುದು ಇದರ ಉದ್ದೇಶವಾಗಿದೆ.

ಜಾತಿ ಗಣಿತಿ ವರದಿಗೆ ವ್ಯಾಪಕ ವಿರೋಧ ಎದುರಾಗಿತ್ತು. ಮೇಲ್ಜಾತಿಯ ಸ್ವಾಮೀಜಿಗಳು, ರಾಜಕಾರಣಿಗಳು ಇದಕ್ಕೆ ವಿರೋಧ ಸೂಚಿಸಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿತ್ತು. ವೀರಶೈವ-ಲಿಂಗಾಯತ ಮತ್ತು ಒಕ್ಕಲಿಗ ಸಂಘಟನೆಗಳು ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದವು. ತಮ್ಮ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಕಡಿಮೆ ತೋರಿಸಲಾಗಿದೆ ಮತ್ತು ಸಮೀಕ್ಷೆ ವೈಜ್ಞಾನಿಕವಾಗಿ ನಡೆದಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಮರು ಸಮೀಕ್ಷೆಗೆ ಆದೇಶ ಮಾಡಲಾಗಿತ್ತು. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ್ ನೇತೃತ್ವದಲ್ಲಿ ವರದಿ ತಯಾರಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ವರದಿಯನ್ನು ಸ್ವೀಕಾರ ಮಾಡಿದ್ದಾರೆ. ಆದರೆ ಈ ವರದಿಯನ್ನು ಜಾರಿಗೆ ತರಬೇಕಾಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಬಳಿಕ ಮುಂದಿನ ಮುಖ್ಯಮಂತ್ರಿ ಅವರು ಈ ವರದಿಯನ್ನು ಜಾರಿಗೆ ತರುತ್ತಾರಾ? ಎಂಬುವುದು ಪ್ರಶ್ನೆಯಾಗಿದೆ.

ಒಂದು ವೇಳೆ ಡಿಕೆ ಶಿವಕುಮಾರ್ ಅವರು ಸಿಎಂ ಆದಲ್ಲಿ ಅವರ ನಿಲುವು ಏನಿರಲಿದೆ? ಎಂಬ ಬಗ್ಗೆ ಸಾಕಷ್ಟು ಕುತೂಹಲ ಇದೆ. ಹೀಗಾಗಿ ಸಿದ್ದರಾಮಯ್ಯ ಅವರು ಅಧಿಕಾರದ ಕೊನೆಯ ಅವಧಿಯಲ್ಲಿ ವರದಿಯನ್ನು ಸ್ವೀಕರಿಸುವ ಮೂಲಕ ಕೇವಲ ಸಂದೇಶ ರವಾನೆ ಮಾಡುತ್ತಾರೆ. ಇದರ ಹೊರತಾಗಿ ವರದಿಯನ್ನು ಜಾರಿಗೆ ತರಲು ಏನು ಕ್ರಮ ಆಗಲಿದೆ ಎಂಬ ಪ್ರಶ್ನೆಯೂ ಉದ್ಭವಿಸುತ್ತಿದೆ.

ಇದನ್ನೂ ನೋಡಿ: IPL 2026 | ಪ್ಲೇಆಫ್‌ ಪೈಪೋಟಿ: ನಾಲ್ಕು ತಂಡಗಳ ಪ್ಲಸ್‌, ಮೈನಸ್‌ ಮತ್ತು ಕಪ್‌ ಲೆಕ್ಕಾಚಾರ Janashakthi Media

Donate Janashakthi Media

Leave a Reply

Your email address will not be published. Required fields are marked *