ಬೆಂಗಳೂರು : ಚಿತ್ತ್ರಕೂಟ ಶಾಲೆಗೆ ಬೆಂಕಿ – ತಪ್ಪಿದ ಭಾರೀ ಅನಾಹುತ

ಬೆಂಗಳೂರು: ನಗರದ ನಾಗದೇವನಹಳ್ಳಿ ಪ್ರದೇಶದಲ್ಲಿರುವ ಖಾಸಗಿ ಶಾಲೆಯ ಕಟ್ಟಡದಲ್ಲಿ ಶನಿವಾರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕಟ್ಟಡದಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು

ಮಾಹಿತಿಯ ಪ್ರಕಾರ, ನಾಗದೇವನಹಳ್ಳಿಯ ಚಿತ್ತ್ರಕೂಟ ಶಾಲೆಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿ ಸಂಪೂರ್ಣವಾಗಿ ನಂದಿಸಲಾಯಿತು.

ಅಗ್ನಿ ಅವಘಡದಲ್ಲಿ ಶಾಲೆಯೊಳಗಿದ್ದ ಕೆಲವು ಪೀಠೋಪಕರಣಗಳು, ವಿದ್ಯುತ್ ಉಪಕರಣಗಳು ಹಾಗೂ ಇತರೆ ವಸ್ತುಗಳಿಗೆ ಹಾನಿಯಾಗಿದೆ. ಆದರೆ ಯಾವುದೇ ವಿದ್ಯಾರ್ಥಿ ಅಥವಾ ಸಿಬ್ಬಂದಿ ಸ್ಥಳದಲ್ಲಿರದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ತಾಪಮಾನಕ್ಕಿಂತ ಭಯಾನಕ ‘ಆರ್ದ್ರ ಶಾಖೆ’: ಕರಾವಳಿ ಜಿಲ್ಲೆಗಳಿಗೆ ತಜ್ಞರ ಎಚ್ಚರಿಕೆ

ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಇತರೆ ತಾಂತ್ರಿಕ ಕಾರಣಗಳಿಂದ ಅವಘಡ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಅಗ್ನಿ ಅವಘಡಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಶಾಲೆಗಳು, ಆಸ್ಪತ್ರೆಗಳು ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಇದನ್ನೂ ನೋಡಿ : ಪಿಣರಾಯಿ ವಿಜಯನ್‌ ಮೇಲಿನ ಇ.ಡಿ. ದಾಳಿ: ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ Janashakthi Media

Donate Janashakthi Media

Leave a Reply

Your email address will not be published. Required fields are marked *