ಬೆಂಗಳೂರು: ಮುಖ್ಯಮಂತ್ರಿ ಪದಗ್ರಹಣಕ್ಕೆ ಸಜ್ಜಾಗಿರುವ ಡಿಕೆ ಶಿವಕುಮಾರ್ ಹಾಗೂ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ರಚನೆ ಕುರಿತು ಅಂತಿಮ ತೀರ್ಮಾನಕ್ಕೆ ಬರಲು ಜೂನ್ 1ರಂದು ನವದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಯಲಿದೆ. ದೆಹಲಿ
ಅಧಿಕಾರದ ಹಸ್ತಾಂತರ ಸುಗಮವಾಗಿ ನಡೆದಿದ್ದರೂ, ಸಚಿವ ಸಂಪುಟದಲ್ಲಿ ತಮ್ಮ ನಿಷ್ಠಾವಂತರನ್ನು ಸೇರಿಸುವ ವಿಚಾರದಲ್ಲಿ ಇಬ್ಬರು ನಾಯಕರ ನಡುವೆ ಅಸಮಾಧಾನ ತಲೆದೋರುವ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿ
ಬುಧವಾರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಶಿವಕುಮಾರ್ ಜೊತೆಗೆ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿಯನ್ನು ಇಬ್ಬರೂ ನಾಯಕರು ಹೈಕಮಾಂಡ್ ಮುಂದೆ ಮಂಡಿಸುವ ನಿರೀಕ್ಷೆಯಿದೆ. ದೆಹಲಿ
ಇದನ್ನೂ ಓದಿ: ಏಷ್ಯನ್ ಗೇಮ್ಸ್‌ಗೆ ಸೂರ್ಯ- ಗಿಲ್ ಔಟ್! ಯುವ ತಾರೆಗಳಿಗೆ ಬಿಸಿಸಿಐ ಮಣೆ – ವೈಭವ್ ಎಂಟ್ರಿ ಸಖತ್ ಸರ್ಪ್ರೈಸ್
ಇನ್ನೂ ಅಂತಿಮವಾಗದಿದ್ದರೂ, ಸುಮಾರು 15-20 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಇದ್ದ ಹಿರಿಯರು ಮತ್ತೆ ಅವಕಾಶ ಸಿಗುವ ನಿರೀಕ್ಷೆಯಲ್ಲಿ ಕಾದಿದ್ದಾರೆ. ಅವರಲ್ಲಿ ಡಾ. ಜಿ ಪರಮೇಶ್ವರ್, ಎಚ್ ಕೆ ಪಾಟೀಲ್, ಕೆ ಎಚ್ ಮುನಿಯಪ್ಪ, ಎಂ ಬಿ ಪಾಟೀಲ್, ಈಶ್ವರ ಖಂಡ್ರೆ, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಜಮೀರ್ ಅಹ್ಮದ್ ಖಾನ್, ಕೆ ವೆಂಕಟೇಶ್, ಶಿವರಾಜ್ ತಂಗಡಗಿ ಹಾಗೂ ಡಾ. ಎಚ್ ಸಿ ಮಹದೇವಪ್ಪ ಸೇರಿದ್ದಾರೆ.
ಇದೇ ವೇಳೆ ಎಎಸ್ ಪೊನ್ನಣ್ಣ, ಸಲೀಂ ಅಹ್ಮದ್, ಸ್ಪೀಕರ್ ಯು ಟಿ ಖಾದರ್, ಎನ್ ಎ ಹ್ಯಾರಿಸ್, ಬಿ ಕೆ ಹರಿಪ್ರಸಾದ್, ಟಿ ಬಿ ಜಯಚಂದ್ರ, ಬಸವರಾಜ ರಾಯರೆಡ್ಡಿ ಮತ್ತು ಪುಟ್ಟರಂಗ ಸೇರಿದಂತೆ ಕೆಲವು ಹೊಸ ಮುಖಗಳ ಹೆಸರುಗಳು ಕೇಳಿಬರುತ್ತಿವೆ.
“ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೇನೆ. ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಸಚಿವ ಸಂಪುಟ ರಚನೆ ಕುರಿತು ಮುಖ್ಯಮಂತ್ರಿಗಳು ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ,” ಎಂದು ಮಾಜಿ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ. ಎಂ ಬಿ ಪಾಟೀಲ್ ಸೇರಿದಂತೆ ಹಲವು ಶಾಸಕರು ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಪ್ರಮಾಣ ವಚನದ ಬಳಿಕ ಭಾಗಶಃ ಸಚಿವ ಸಂಪುಟ ರಚನೆಯಾಗಲಿದ್ದು, ಉಳಿದ ಸ್ಥಾನಗಳನ್ನು ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಮತ್ತು ಎಂಎಲ್‌ಸಿ ಚುನಾವಣೆಗಳ ನಂತರ ಭರ್ತಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ ಸಚಿವ ಸ್ಥಾನಾಕಾಂಕ್ಷಿಗಳಾದ ಅನೇಕರು, ವಿಶೇಷವಾಗಿ ಸಿದ್ದರಾಮಯ್ಯ ಬಳಗದ ನಾಯಕರು ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಪ್ರಥಮ ಬಾರಿಗೆ ಶಾಸಕರಾದ ಬಸವರಾಜ ಶಿವಗಂಗಾ ಮತ್ತು ದರ್ಶನ್ ಧ್ರುವನಾರಾಯಣ ಕೂಡ ತಮ್ಮ ಗುರುಗಳನ್ನು ಭೇಟಿ ಮಾಡಿದ್ದಾರೆ.
ಬುಧವಾರ ಯಾರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, “ಅದು ನನಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ. ನಾನು ಪ್ರತಿಕ್ರಿಯಿಸುವುದಿಲ್ಲ,” ಎಂದು ತಿಳಿಸಿದ್ದಾರೆ.
ಯತೀಂದ್ರ ಭೇಟಿ
ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಡಾ. ಯತೀಂದ್ರ ಅವರು ಭಾನುವಾರ ಸಂಜೆ ಕುಮಾರಕೃಪಾ ಅತಿಥಿ ಗೃಹದಲ್ಲಿ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಶಿವಕುಮಾರ್ ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
“ನಾನು ಸಚಿವ ಸ್ಥಾನಾಕಾಂಕ್ಷಿ. ಹೈಕಮಾಂಡ್ ಕೂಡ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದೆ. ಯಾವ ಖಾತೆ ನೀಡಿದರೂ ನಿರ್ವಹಿಸಲು ಸಿದ್ಧನಿದ್ದೇನೆ,” ಎಂದು ಯತೀಂದ್ರ ಹೇಳಿದ್ದಾರೆ.
ಶಿವಕುಮಾರ್ ಅವರನ್ನು ಅಭಿನಂದಿಸಲು ಭೇಟಿ ಮಾಡಿದಷ್ಟೇ ಹೊರತು ಯಾವುದೇ ಪ್ರಮುಖ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಇದನ್ನೂ ನೋಡಿ: ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ಸಿಐಟಿಯು ಪ್ರತಿಕ್ರಿಯೆ ಏನು? Janashakthi Media
