ನವದೆಹಲಿ: ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯಾದ ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ರಾಷ್ಟ್ರಪತಿಯವರ ಆದೇಶದೊಂದಿಗೆ ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದು, ಇದರೊಂದಿಗೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಸುಪ್ರೀಂ
ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ್ದ ಐದು ಹೆಸರುಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇವರಲ್ಲಿ ನಾಲ್ವರು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿದ್ದು, ಒಬ್ಬ ಹಿರಿಯ ವಕೀಲರೂ ಸೇರಿದ್ದಾರೆ. ನೇಮಕಗೊಂಡವರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್, ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಸಚ್‌ದೇವಾ, ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರುಣ್ ಪಲ್ಲಿ ಮತ್ತು ಹಿರಿಯ ವಕೀಲ ವಿ. ಮೋಹನಾ ಸೇರಿದ್ದಾರೆ.
ಇದನ್ನು ಓದಿ : ಸಿಬಿಎಸ್‌ಇ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ: ‘ತಪ್ಪು ಅವರದು, ದಂಡ ವಿದ್ಯಾರ್ಥಿಗಳದು’
ನ್ಯಾಯಮೂರ್ತಿಗಳ ಕೊರತೆ ಹಾಗೂ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ನಿವಾರಣೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಿಸುವ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ಅನುಮೋದಿತ ನ್ಯಾಯಮೂರ್ತಿಗಳ ಸಂಖ್ಯೆಯನ್ನು 38ಕ್ಕೆ ಹೆಚ್ಚಿಸುವ ನಿರ್ಧಾರವೂ ಜಾರಿಗೆ ಬಂದಿತ್ತು. ಹೊಸ ನೇಮಕಾತಿಗಳಿಂದ ನ್ಯಾಯಾಂಗದ ಕಾರ್ಯಕ್ಷಮತೆ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ. ಸುಪ್ರೀಂ
ಕೊಲಿಜಿಯಂ ಮೇ 27ರಂದು ಈ ಐವರ ಹೆಸರನ್ನು ಶಿಫಾರಸು ಮಾಡಿತ್ತು. ಕೇಂದ್ರ ಸರ್ಕಾರದ ಅನುಮೋದನೆಯ ಬಳಿಕ ರಾಷ್ಟ್ರಪತಿಯವರು ನೇಮಕಾತಿಗೆ ಮುದ್ರೆ ಒತ್ತಿದ್ದಾರೆ. ಇದರೊಂದಿಗೆ ಸುಪ್ರೀಂ ಕೋರ್ಟ್ ತನ್ನ ಪೂರ್ಣ ಸಾಮರ್ಥ್ಯದ ಸಮೀಪಕ್ಕೆ ತಲುಪಿದ್ದು, ನ್ಯಾಯ ವಿತರಣಾ ಪ್ರಕ್ರಿಯೆಯನ್ನು ವೇಗಗೊಳಿಸಲು ನೆರವಾಗಲಿದೆ ಎಂದು ಕಾನೂನು ವಲಯಗಳು ಅಭಿಪ್ರಾಯಪಟ್ಟಿವೆ.
ಇದನ್ನೂ ನೋಡಿ : ಪಿಣರಾಯಿ ವಿಜಯನ್ ಮೇಲಿನ ಇ.ಡಿ. ದಾಳಿ: ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ Janashakthi Media
