ಬೆಂಗಳೂರು: ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ನನ್ನ ಕುರಿತ ಆಡಿಯೊ ನಕಲಿಯಾಗಿದ್ದು, ಎ.ಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪತ್ರಿಕಾ ಹೇಳಿಕೆ ನೀಡಿದ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು| ಶಿಶು ಮರಣದರದಲ್ಲಿ ಸಣ್ಣ ಏರಿಕೆ; ರಾಜ್ಯ ಇನ್ನೂ ರಾಷ್ಟ್ರೀಯ ಸರಾಸರಿಗಿಂತ ಉತ್ತಮ
ಆಡಿಯೊ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು ಎಂದು ತಿಳಿಸಿದ್ದಾರೆ.
ಇದನ್ನೂ ನೋಡಿ: ನನ್ನ ಮತ ಕಸಿಯುವ ಎಸ್‌ಐಆರ್ ರದ್ದುಪಡಿಸಿ – ದುಂಡುಮೇಜಿನ ಸಭೆಯಲ್ಲಿ ಆಕ್ರೋಶ Janashakthi Media
