ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!

ನವದೆಹಲಿ: ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಅವರು ಜೂನ್‌ 2ರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ.

ತಮಿಳುನಾಡು ಬಿ.ಜೆ.ಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಅವರನ್ನು ಬದಲಿಸಿ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಿದ ನಂತರ, ಅವರು ಪಕ್ಷದ ಚಟುವಟಿಕೆಗಳಿಂದ ಸ್ವಲ್ಪ ದೂರ ಉಳಿದಿದ್ದರು.

ಇದನ್ನೂ ಓದಿ: 600 ವಿಧೇಯಕ ಅಂಗೀಕಾರ, ಆದರೆ ಚರ್ಚೆ ಎಷ್ಟು? – PRS ವರದಿ ಬೆಚ್ಚಿಬೀಳಿಸುವ ಅಂಶಗಳು

ಇದಾದ ಬಳಿಕ ಅವರು ಬಿ.ಜೆ.ಪಿಯಿಂದ ದೂರವಾಗಲು ಬಯಸುತ್ತಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಜೋರಾಗಿದ್ದವು. ಪಕ್ಷದಲ್ಲಿ ತಮ್ಮ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಅನಿಶ್ಚಿತತೆ ಎದುರಿಸುತ್ತಿದ್ದಾರೆ ಎಂಬ ವರದಿಗಳೂ ಕೇಳಿ ಬಂದಿದ್ದವು.

ಇದನ್ನೂ ನೋಡಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ಎನ್‌ಟಿಎ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ; ಕಾರ್ಯಕರ್ತರ ಬಂಧನ Janashakthi Media

Donate Janashakthi Media

Leave a Reply

Your email address will not be published. Required fields are marked *