ಬೆಂಗಳೂರು: ಖಾತೆ ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ, ತಾವು ತಾಳ್ಮೆ ಕಳೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದು, ಪಕ್ಷದ ನಾಯಕತ್ವದ ಮುಂದಿನ ನಿರ್ಧಾರಕ್ಕಾಗಿ ಕಾಯುವುದಾಗಿ ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ
ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿರುವ ರಾಮಲಿಂಗಾ ರೆಡ್ಡಿ, ಚರ್ಚೆಯಲ್ಲಿ ಪ್ರಸ್ತಾಪವಾದ ವಿಷಯಗಳನ್ನು ಪಕ್ಷದ ನಾಯಕತ್ವ ಮತ್ತೊಮ್ಮೆ ಪರಿಶೀಲಿಸಲಿದೆ ಎಂದು ತಿಳಿಸಿದ್ದಾರೆ. ಸದ್ಯ ಪರಿಸ್ಥಿತಿಯನ್ನು ಶಾಂತವಾಗಿ ಗಮನಿಸುತ್ತಿದ್ದು, ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : “ಪ್ರಶ್ನಿಸುವುದು ನಮ್ಮ ಹಕ್ಕು; ಮೌನವಾಗಿ ಬದುಕಲು ನಾವು ಪ್ರಾಣಿಗಳಲ್ಲ” : ಪ್ರಕಾಶ್ ರಾಜ್
ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಅಂತಿಮವಾಗಿ ಜಲಸಂಪನ್ಮೂಲ ಖಾತೆ ಹಂಚಿಕೆಯಾಗಿದ್ದರಿಂದ ಅಸಮಾಧಾನಗೊಂಡ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಬೆಳವಣಿಗೆ ಹೊಸ ಸರ್ಕಾರಕ್ಕೆ ಮುಜುಗರ ಉಂಟುಮಾಡಿತ್ತು.
ಇದೀಗ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ರಾಮಲಿಂಗಾ ರೆಡ್ಡಿ ತಮ್ಮ ಆತ್ಮೀಯ ಸ್ನೇಹಿತರು, ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬಳಿಕ ಇಬ್ಬರ ನಡುವಿನ ಭಿನ್ನಾಭಿಪ್ರಾಯಗಳು ಬಗೆಹರಿದಿವೆ ಎಂದು ಅವರು ತಿಳಿಸಿದ್ದಾರೆ.
ಈ ಬೆಳವಣಿಗೆಯಿಂದ ಕಾಂಗ್ರೆಸ್ ಸರ್ಕಾರದೊಳಗಿನ ಖಾತೆ ಹಂಚಿಕೆ ವಿವಾದ ಸದ್ಯಕ್ಕೆ ತಣ್ಣಗಾಗುವ ಸಾಧ್ಯತೆ ಕಂಡುಬಂದಿದ್ದು, ರಾಮಲಿಂಗಾ ರೆಡ್ಡಿ ತಮ್ಮ ರಾಜೀನಾಮೆ ನಿರ್ಧಾರವನ್ನು ಹಿಂಪಡೆಯುವರೇ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. ರಾಮಲಿಂಗಾ ರೆಡ್ಡಿ
ಇದನ್ನೂ ನೋಡಿ : ಪರೀಕ್ಷಾ ಅಕ್ರಮಗಳಿಗೆ ಇನ್ನು ಸಾಕು! ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ವ್ಯಾಪಕ ಒತ್ತಾಯ Janashakthi Media
