ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ: ದೇಶಾದ್ಯಂತ ಪ್ರತಿಭಟನೆ ಎಚ್ಚರಿಕೆ ನೀಡಿದ CJP

ನವದೆಹಲಿ: ಪರೀಕ್ಷೆಗಳು ಮತ್ತು ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಆರೋಪಗಳ ಹಿನ್ನೆಲೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಜೂನ್ 13ರೊಳಗೆ ರಾಜೀನಾಮೆ ನೀಡದಿದ್ದರೆ ದೇಶದ ವಿವಿಧ ರಾಜ್ಯಗಳು ಹಾಗೂ ನಗರಗಳಲ್ಲಿ ವ್ಯಾಪಕ ಪ್ರತಿಭಟನೆಗಳನ್ನು ಆರಂಭಿಸುವುದಾಗಿ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ. ಶಿಕ್ಷಣ 

ಸಾಮಾಜಿಕ ಜಾಲತಾಣ X ನಲ್ಲಿ ಪ್ರಕಟಿಸಿದ ವಿಡಿಯೋ ಸಂದೇಶದಲ್ಲಿ ದೀಪ್ಕೆ, “ಈಗಾಗಲೇ ನಾನು ಹೇಳಿದ್ದೇನೆ — ಜೂನ್ 13ರೊಳಗೆ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡದಿದ್ದರೆ, ಪ್ರತಿಭಟನೆಗಳನ್ನು ವಿಸ್ತರಿಸಲಾಗುವುದು. ಅವರು ಹುದ್ದೆಯಲ್ಲಿ ಮುಂದುವರಿದರೆ, ನಾನು ಸ್ವತಃ ವಿವಿಧ ರಾಜ್ಯಗಳು ಹಾಗೂ ನಗರಗಳಿಗೆ ತೆರಳಿ ಅವರ ರಾಜೀನಾಮೆಗಾಗಿ ಪ್ರತಿಭಟನೆ ನಡೆಸುತ್ತೇನೆ” ಎಂದು ತಿಳಿಸಿದ್ದಾರೆ. ಶಿಕ್ಷಣ 

ರಾಜ್ಯ ಮಟ್ಟದ ಪ್ರತಿಭಟನೆಗಳು ಫಲ ನೀಡದಿದ್ದರೆ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಮ್ಮೆ ದೊಡ್ಡ ಮಟ್ಟದ ಚಳವಳಿಯನ್ನು ಆರಂಭಿಸುವುದಾಗಿ ಅವರು ತಿಳಿಸಿದ್ದಾರೆ. “ರಾಜ್ಯಗಳಲ್ಲಿ ನಡೆಯುವ ಪ್ರತಿಭಟನೆಗಳ ಬಳಿಕವೂ ಪ್ರಧಾನ ರಾಜೀನಾಮೆ ನೀಡದಿದ್ದರೆ, ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ನವದೆಹಲಿಗೆ ಬಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಮ್ ಸ್ವಾಪ್ ವಂಚನೆಗೆ ಬಿಎಸ್‌ಎನ್‌ಎಲ್ ಹೊಣೆ; ₹50.50 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

“ಒಂದು ಕೋಟಿ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿರುವ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ದೀಪ್ಕೆ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ನೆರೆ ರಾಷ್ಟ್ರಗಳಾದ ನೇಪಾಳ ಮತ್ತು ಬಾಂಗ್ಲಾದೇಶಗಳಲ್ಲಿ ನಡೆದ ಜೆನ್ Z ನೇತೃತ್ವದ ಪ್ರತಿಭಟನೆಗಳೊಂದಿಗೆ ಹೋಲಿಕೆ ಮಾಡಲಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ದೀಪ್ಕೆ, “ಭಾರತದಲ್ಲಿ ವ್ಯವಸ್ಥೆ ಇದೆ. ನಮ್ಮ ಚಳವಳಿಯನ್ನು ಆ ದೇಶಗಳ ಪ್ರತಿಭಟನೆಗಳೊಂದಿಗೆ ಹೋಲಿಸುವುದು ಸರಿಯಲ್ಲ. ನಾವು ದೇಶದಲ್ಲಿ ಅಶಾಂತಿ ಸೃಷ್ಟಿಸಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಅವರು ಮುಂದುವರಿದು, “ಜಂತರ ಮಂತರದಲ್ಲಿ ನಡೆದ ನಮ್ಮ ಪ್ರತಿಭಟನೆ ತುಂಬಾ ಶಾಂತಿಯುತವಾಗಿತ್ತು. ದೇಶದ ಮೂಲೆಮೂಲೆಗಳಿಂದ ಯುವಕರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆಯಲಿವೆ ಮತ್ತು ಅವುಗಳೂ ಶಾಂತಿಯುತವಾಗಿಯೇ ಇರುತ್ತವೆ” ಎಂದು ಹೇಳಿದರು.

ಮೇ ತಿಂಗಳಲ್ಲಿ ಆನ್‌ಲೈನ್ ವ್ಯಂಗ್ಯ ಅಭಿಯಾನವಾಗಿ ಆರಂಭವಾದ CJP, ಇತ್ತೀಚೆಗೆ ನವದೆಹಲಿಯ ಜಂತರ ಮಂತರದಲ್ಲಿ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿತ್ತು. ಪ್ರತಿಭಟನಾಕಾರರು ಕಾಕ್‌ರೋಚ್ ಮುಖವಾಡಗಳನ್ನು ಧರಿಸಿ, ಫಲಕಗಳನ್ನು ಹಿಡಿದು, “ಹಿಂದೂ-ಮುಸ್ಲಿಂ” ರಾಜಕೀಯದ ವಿರುದ್ಧ ಘೋಷಣೆಗಳನ್ನು ಕೂಗಿದರು ಹಾಗೂ “ಭಾರತ್ ಮಾತಾ ಕಿ ಜಯ್” ಎಂಬ ನಾರೆಯನ್ನು ಎತ್ತಿದರು.

ಇದನ್ನೂ ನೋಡಿ: ಸಾಮಾಜಿಕ ನ್ಯಾಯ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ – ಕೆ.ನೀಲಾ Janashakthi Media

Donate Janashakthi Media

Leave a Reply

Your email address will not be published. Required fields are marked *