ಬಿಜೆಪಿಗೆ ಎದುರಾಗಿ ಜಂಟಿ ಹೋರಾಟಕ್ಕೆ ಇಂಡಿಯಾ ಒಕ್ಕೂಟದ ಹೊಸ ತಂತ್ರ: ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ

ನವದೆಹಲಿ: ಬಿಜೆಪಿಯ ವಿರುದ್ಧ ಹೋರಾಟವನ್ನು ಮತ್ತಷ್ಟು ಸಂಘಟಿತಗೊಳಿಸುವ ಉದ್ದೇಶದಿಂದ ಇಂಡಿಯಾ ಒಕ್ಕೂಟವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ನವದೆಹಲಿಯಲ್ಲಿ ಸೋಮವಾರ ನಡೆದ ಒಕ್ಕೂಟದ ಸಭೆಯಲ್ಲಿ ಇನ್ನು ಮುಂದೆ ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಮುಂದಿನ ಸಭೆಯನ್ನು ಆಗಸ್ಟ್‌ 8ರಂದು ನಡೆಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬಿಜೆಪಿಗೆ

ಸಂವಿಧಾನ ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌, ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾ ದಳ, ರಾಷ್ಟ್ರೀಯ ಸಮ್ಮೇಳನ, ಶಿವಸೇನೆ (ಉದ್ಧವ್‌ ಬಣ), ಎನ್‌ಸಿಪಿ (ಶರದ್‌ ಪವಾರ್‌ ಬಣ), ಸಿಪಿಐ(ಎಂ), ಸಿಪಿಐ ಸೇರಿದಂತೆ 25 ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಜಂಟಿ ಹೋರಾಟವನ್ನು ತೀವ್ರಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು.

ಸಭೆಯ ಬಳಿಕ ಮಾತನಾಡಿದ ಖರ್ಗೆ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ, ಚುನಾವಣಾ ಪಾರದರ್ಶಕತೆ, ಪರೀಕ್ಷಾ ಅಕ್ರಮಗಳು, ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ದೇಶವ್ಯಾಪಿ ಹೋರಾಟ ನಡೆಸಲು ಒಕ್ಕೂಟ ಒಮ್ಮತಕ್ಕೆ ಬಂದಿದೆ ಎಂದು ಹೇಳಿದರು. ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುವ ನಿರ್ಧಾರವನ್ನೂ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಬಿಜೆಪಿಗೆಜಂಟಿ ಹೋರಾಟ

ಇದನ್ನೂ ಓದಿ : ಮಮತಾಗೆ ಮತ್ತೊಂದು ಆಘಾತ? ವಿಧಾನಸಭೆಯಂತೆ ಲೋಕಸಭೆಯಲ್ಲೂ ಟಿಎಂಸಿ ಇಬ್ಬಾಗವೇ?

ಇತ್ತೀಚಿನ ರಾಜ್ಯಗಳ ಚುನಾವಣಾ ಫಲಿತಾಂಶಗಳ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟದ ಭವಿಷ್ಯದ ಕುರಿತು ಪ್ರಶ್ನೆಗಳು ಉದ್ಭವಿಸಿದ್ದರೂ, ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಏಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಭೆ ಮಹತ್ವ ಪಡೆದಿದೆ. 2029ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಮಟ್ಟದಲ್ಲಿ ಜಂಟಿ ಕಾರ್ಯತಂತ್ರ ರೂಪಿಸಲು ಒಕ್ಕೂಟ ಮುಂದಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಕೆಲವು ಮಿತ್ರಪಕ್ಷಗಳು ಕಾಂಗ್ರೆಸ್‌ನ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರೂ, ಒಕ್ಕೂಟವನ್ನು ಮುಂದುವರಿಸುವ ಅಗತ್ಯದ ಬಗ್ಗೆ ಬಹುತೇಕ ಪಕ್ಷಗಳು ಒಮ್ಮತ ವ್ಯಕ್ತಪಡಿಸಿವೆ. ನಿಯಮಿತ ಸಭೆಗಳ ಮೂಲಕ ಸಮನ್ವಯ ಹೆಚ್ಚಿಸಿ ಬಿಜೆಪಿಗೆ ಪರ್ಯಾಯ ರಾಜಕೀಯ ವೇದಿಕೆಯನ್ನು ಬಲಪಡಿಸಲು ಇಂಡಿಯಾ ಒಕ್ಕೂಟ ಮುಂದಾಗಿದೆ.

ಇದನ್ನೂ ನೋಡಿ : “ಅನ್ನದಾತನ ಬೆನ್ನಿಗೆ ಚೂರಿ? ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಒಂದೇ ನಿಲುವೇ?” | ಬಸವರಾಜ | ಗುರುರಾಜ ದೇಸಾಯಿ

Donate Janashakthi Media

Leave a Reply

Your email address will not be published. Required fields are marked *