ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕರ್ನಾಟಕದ ಜನರಿಗಾಗಿ ಜಾರಿಗೊಳಿಸಲಾಗಿದ್ದು, ಅವುಗಳ ಲಾಭ ರಾಜ್ಯದ ಮತದಾರರಿಗೆ ಮಾತ್ರ ದೊರೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ
ಜೂನ್ 15 ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದ ಜನರಿಗಾಗಿ ಜಾರಿಗೊಳಿಸಿದ್ದೇವೆ. ಕೆಲವೊಂದು ದುರುಪಯೋಗಗಳು ಕಂಡುಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಇಲ್ಲಿ ಮತದಾರರಾಗಿರುವವರೇ ಯೋಜನೆಗಳ ಫಲಾನುಭವಿಗಳಾಗಬೇಕು” ಎಂದು ಹೇಳಿದರು.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರೀತಿ ಮತ್ತು ಕಾಳಜಿಯಿಂದ ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಯೋಜನೆಗಳನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ
ಇದನ್ನೂ ಓದಿ : ಜೈಪುರ ಪ್ರತಿಭಟನೆಯಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಹಲ್ಲೆ; ನಾಲ್ವರು ವಶಕ್ಕೆ
ಫಲಾನುಭವಿಗಳು ಸರಿಯಾದ ಗುರುತಿನ ವಿವರ, ಮೊಬೈಲ್ ಸಂಖ್ಯೆ ಮತ್ತು ಇತರ ಮಾಹಿತಿಗಳನ್ನು ನೀಡಬೇಕು. ಯೋಜನೆ ಆರಂಭದ ವೇಳೆ ಕೆಲವರು ಕುಟುಂಬ ಸದಸ್ಯರ ಅಥವಾ ಇತರರ ಮೊಬೈಲ್ ಸಂಖ್ಯೆಯನ್ನು ನೀಡಿದ್ದರಿಂದ ಹಣ ತಪ್ಪು ಖಾತೆಗಳಿಗೆ ಜಮೆಯಾಗಿರುವ ಪ್ರಕರಣಗಳು ಕಂಡುಬಂದಿವೆ. ಆದ್ದರಿಂದ ಹಣ ನೇರವಾಗಿ ಅರ್ಹ ಫಲಾನುಭವಿಗಳ ಖಾತೆಗಳಿಗೆ ತಲುಪುವಂತೆ ಪರಿಶೀಲನಾ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ ಎಂದು ಹೇಳಿದರು. ಗ್ಯಾರಂಟಿ
ಉಚಿತ ಬಸ್ ಪ್ರಯಾಣ, ವಿದ್ಯುತ್ ಸಬ್ಸಿಡಿ ಹಾಗೂ ಇತರ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಕರ್ನಾಟಕದ ಮತದಾರರಿಗೆ ಮಾತ್ರ ಸಿಗಬೇಕು. “ಇಲ್ಲಿನ ಮತದಾರರಲ್ಲದವರಿಗೆ ಈ ಸೌಲಭ್ಯಗಳನ್ನು ಏಕೆ ನೀಡಬೇಕು?” ಎಂದು ಅವರು ಪ್ರಶ್ನಿಸಿದರು.
ಇದೇ ವೇಳೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಸಚಿವ ಸಂಪುಟ ತೀರ್ಮಾನಿಸಿದ್ದು, ಅದರ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಹಣ ದುರುಪಯೋಗವಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಕೆಲವರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ವಂಚಕ ಹಣಕಾಸು ವ್ಯವಹಾರಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇಂತಹ ಚಟುವಟಿಕೆಗಳನ್ನು ಗ್ರಾಮ ಪಂಚಾಯಿತಿಯಿಂದ ತಾಲ್ಲೂಕು ಪಂಚಾಯಿತಿ ಮಟ್ಟದವರೆಗೆ ತಡೆಯಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದ ಗ್ಯಾರಂಟಿ ಮಾದರಿ ದೇಶಕ್ಕೆ ಮಾದರಿಯಾಗಿದೆ. ಇತರ ರಾಜ್ಯಗಳೂ ಇದೇ ರೀತಿಯ ಯೋಜನೆಗಳನ್ನು ಅನುಸರಿಸುತ್ತಿವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಗ್ಯಾರಂಟಿ
ಇದನ್ನೂ ನೋಡಿ : SIR ತೀರ್ಪಿನ ಒಳನೋಟ: ಸಂವಿಧಾನ, ನಾಗರಿಕತ್ವ ಮತ್ತು ಮತದಾನದ ಹಕ್ಕು |ಜಸ್ಟೀಸ್ ಗೋಪಾಲಗೌಡ
