ನಟಿ ರುಕ್ಮಿಣಿ ವಸಂತ್ ವಿರುದ್ಧ ಎಐ ಬಳಸಿ ಅಶ್ಲೀಲ ಚಿತ್ರ ಹರಡಿದ ಮೂವರ ಬಂಧನ

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಬಳಸಿ ನಟಿ ರುಕ್ಮಿಣಿ ವಸಂತ್ ಅವರ ಅಶ್ಲೀಲ ಚಿತ್ರಗಳು ಮತ್ತು ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಆರೋಪದಲ್ಲಿ ಮೂವರನ್ನು ಕರ್ನಾಟಕ ಸೈಬರ್ ಕಮಾಂಡ್ ಜೂನ್‌ 19ರಂದು ಬಂಧಿಸಿದೆ. ನಟಿ 

ಬಂಧಿತರನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ರವಿಕುಮಾರ್ (24), ಬೆಂಗಳೂರಿನ ಕಾಮಾಕ್ಷಿಪಾಳ್ಯದ ಚಂದ್ರಕಾಂತ್ (33) ಮತ್ತು ನಾಗಸಂದ್ರದ ರಂಜಿತ್ (25) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಗ್ರೇಟ್ ನಿಕೋಬಾರ್ ಯೋಜನೆಗೆ ಪಾರದರ್ಶಕತೆ ಕೊರತೆ: ಕೇಂದ್ರಕ್ಕೆ ಜೈರಾಮ್ ರಮೇಶ್ ಟೀಕೆ

‘ಕಾಂತಾರ: ಎ ಲೆಜೆಂಡ್ ಚಾಪ್ಟರ್-1’ ಸಿನಿಮಾದ ಮೂಲಕ ಖ್ಯಾತಿ ಪಡೆದ ರುಕ್ಮಿಣಿ ವಸಂತ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆಯ ವೇಳೆ, ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಿದ ಅಶ್ಲೀಲ ಚಿತ್ರಗಳು ಹಾಗೂ ವಿಡಿಯೋಗಳನ್ನು ದೂರುದಾರರನ್ನು ಅವಹೇಳನಕಾರಿ ರೀತಿಯಲ್ಲಿ ಪ್ರದರ್ಶಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ ಎಂದು ಸೈಬರ್ ಕಮಾಂಡ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮೂವರನ್ನು ಬಂಧಿಸಲಾಗಿದೆ. ಆರೋಪಿತರಿಂದ ಅಪರಾಧಕ್ಕೆ ಬಳಸಿದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ನೋಡಿ: ಭೂಮಿ ಹೋಯ್ತು, ಉದ್ಯೋಗ ಸಿಗಲಿಲ್ಲ! 13 ವರ್ಷ ಕಳೆದರೂ ಸಿಗದ ನ್ಯಾಯ! Janashakthi Media

Donate Janashakthi Media

Leave a Reply

Your email address will not be published. Required fields are marked *