ಪ್ರಕೃತಿ ವಿಕೋಪಕ್ಕೆ ಮುನ್ನೆಚ್ಚರಿಕೆ: ಬರ ಪರಿಸ್ಥಿತಿ ಎದುರಿಸಲು ಡಿಸಿಎಂ ಪರಮೇಶ್ವರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್‌ ನೀನೋ ಪರಿಣಾಮದಿಂದ ಉಂಟಾಗುವ ಬರ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಕೃತಿ 

ವಿಧಾನಸೌಧದಲ್ಲಿ ಜೂನ್‌ 25ರಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಳೆ ಕೊರತೆ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಮಗ್ರವಾಗಿ ಪರಿಶೀಲಿಸಿದರು.

ಹವಾಮಾನ ವೈಪರೀತ್ಯದಿಂದ ರಾಜ್ಯದ ಕೆಲ ಭಾಗಗಳಲ್ಲಿ ಬರದ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದ್ದು, ಅದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾವಾರು ಮುನ್ನೆಚ್ಚರಿಕಾ ಯೋಜನೆಗಳನ್ನು ತಯಾರಿಸಲು ಅವರು ಸೂಚಿಸಿದರು. ನೀರಿನ ಸಂರಕ್ಷಣೆ, ಜಲಾಶಯಗಳ ಮಟ್ಟದ ನಿಗಾ ಹಾಗೂ ಅಂತರ್ಜಲ ಸ್ಥಿತಿಯ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸಬೇಕೆಂದು ತಿಳಿಸಿದರು.

ಇದನ್ನೂ ಓದಿ: ಮುಂಬೈ| ಭಾರೀ ಮಳೆಗೆ ನಗರ ತತ್ತರ – ರಸ್ತೆ, ರೈಲು ಸಂಚಾರ ಅಸ್ತವ್ಯಸ್ತ

ಅಗತ್ಯವಿದ್ದಲ್ಲಿ ಕೊಳವೆಬಾವಿ ಕೊರೆಸಲು ತಕ್ಷಣ ಅನುಮತಿ ನೀಡಬೇಕು ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯೊಂದಿಗೆ ಸಮನ್ವಯವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಸ್ತುತ ರಾಜ್ಯದ 122 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ನಡೆಯುತ್ತಿದೆ. ಜೊತೆಗೆ 789 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಹಾಗೂ 669 ಹಳ್ಳಿಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಗಿದೆ.

ಸಭೆಯಲ್ಲಿ ಹಿರಿಯ ಅಧಿಕಾರಿಗಳು ಮನೋಜ್ ಕುಮಾರ್ ಮೀನಾ, ಮುಲ್ಲೈ ಮುಗಿಲನ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ನೋಡಿ: BLO ಕೆಲಸದ ಒತ್ತಡಕ್ಕೆ ಬೇಸತ್ತ ಅಂಗನವಾಡಿ ನೌಕರರು! ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *