ಎಸ್‌ಐಆರ್ ಕರ್ತವ್ಯದ ವೇಳೆ ಕುಸಿದು ಬಿದ್ದ ಅಂಗನವಾಡಿ ಕಾರ್ಯಕರ್ತೆ; ಸಾವು

ಭದ್ರಾವತಿ: ತಾಲ್ಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರದಲ್ಲಿ ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಎಚ್. (52) ಎಸ್‌ಐಆರ್ ಕರ್ತವ್ಯ ನಿರ್ವಹಿಸುವ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ಜುಲೈ 6ರಂದು ನಡೆದಿದೆ.

ಅಂಗನವಾಡಿ ಕೇಂದ್ರದಲ್ಲಿ ಗಣತಿ ನಮೂನೆಗಳನ್ನು ಸಿದ್ಧಪಡಿಸಿಕೊಂಡು, ಮನೆಮನೆಗೆ ಭೇಟಿ ನೀಡಲು ಕೋಡಿಹೊಸೂರು ಗ್ರಾಮಕ್ಕೆ ತೆರಳುವಾಗ ಅವರಿಗೆ ತೀವ್ರ ಆಯಾಸ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಅರಬಿಳಚಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ಇದನ್ನೂ ಓದಿ: ‘ಆಪರೇಷನ್ ರಾಮ ಮಂದಿರ?’: ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಭದ್ರಾವತಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯೇ ಅವರು ನಿಧನರಾಗಿದ್ದಾರೆ.

ಮಂಜುಳಾ ಅವರು ಕಳೆದ 30 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ನಿಧನ ಸ್ಥಳೀಯರಲ್ಲಿ ದುಃಖ ಮೂಡಿಸಿದೆ.

ಇದನ್ನೂ ನೋಡಿ: ನವ ಉದಾರವಾದಿ ಆರ್ಥಿಕತೆಯಲ್ಲಿ ನಿರುದ್ಯೋಗದ ಬಿಕ್ಕಟ್ಟು -ನಾಗರಾಜ ಶಾನಭೋಗ Janashakthi Media

Donate Janashakthi Media

Leave a Reply

Your email address will not be published. Required fields are marked *