ಬೆಂಗಳೂರಿನ ಜ್ವಲಂತ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ’

ಬೆಂಗಳೂರು: ಬೆಲೆ ಏರಿಕೆ, ನಿರುದ್ಯೋಗ, ಕುಡಿಯುವ ನೀರಿನ ಸಮಸ್ಯೆ, ರಸ್ತೆ, ಕಸದ ನಿರ್ವಹಣೆ, ವಸತಿ, ಬಿಪಿಎಲ್ ಕಾರ್ಡ್, ವಿದ್ಯುತ್ ಖಾಸಗೀಕರಣ ಸೇರಿದಂತೆ ಬೆಂಗಳೂರಿನ ನಾಗರಿಕರನ್ನು ಕಾಡುತ್ತಿರುವ ವಿವಿಧ ಸಮಸ್ಯೆಗಳ ವಿರುದ್ಧ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲಾ ಸಮಿತಿಗಳು ಜುಲೈ 12ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ಜನಾಕ್ರೋಶ ಸಮಾವೇಶ’ ಆಯೋಜಿಸಿದೆ. ಬೆಂಗಳೂರಿನ 

ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿರುವ ಸಮಾವೇಶದಲ್ಲಿ ನಗರದ ವಿವಿಧ ಭಾಗಗಳ ನಾಗರಿಕರು, ಕಾರ್ಮಿಕರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು ಹಾಗೂ ಜನಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಬಡವರ ಹಸಿವಿನ ಅರಿವಿಲ್ಲದ ಜನರಿಂದ ಬೀದಿ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ – ಮುನೀರ್ ಕಾಟಿಪಳ್ಳ ಆಕ್ರೋಶ

ಸಮಾವೇಶದಲ್ಲಿ ಆಹಾರ ಪದಾರ್ಥಗಳು, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ನಿಯಂತ್ರಿಸುವುದು, ಯುವಜನರಿಗೆ ಉದ್ಯೋಗ ಹಾಗೂ ಖಾಲಿ ಹುದ್ದೆಗಳ ಭರ್ತಿ, ಎಲ್ಲರಿಗೂ ವಸತಿ ಮತ್ತು ನಿವೇಶನ, ಶಾಶ್ವತ ಕುಡಿಯುವ ನೀರು, ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ಬಿಪಿಎಲ್ ಕಾರ್ಡ್ ಸಮಸ್ಯೆಗಳ ಪರಿಹಾರ, ಸ್ಲಂ ನಿವಾಸಿಗಳಿಗೆ ಭೂಮಿ ಮತ್ತು ವಸತಿ ಹಕ್ಕು, ಸುರಂಗ ರಸ್ತೆ ಯೋಜನೆ ರದ್ದು, ಬೀದಿಬದಿ ವ್ಯಾಪಾರಿಗಳ ತೆರವು ನಿಲ್ಲಿಸುವುದು ಹಾಗೂ ವಿದ್ಯುತ್ ಖಾಸಗೀಕರಣ ಹಿಂಪಡೆಯುವುದು, ಸಂವಿಧಾನಬದ್ಧ ಮತದಾನದ ಹಕ್ಕಿನ ರಕ್ಷಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಡಲಾಗುವುದು ಎಂದು ಸಿಪಿಐ(ಎಂ) ತಿಳಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡದೆ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿರುವ ಸಿಪಿಐ(ಎಂ), ಈ ಸಮಸ್ಯೆಗಳ ವಿರುದ್ಧ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು ಧ್ವನಿ ಎತ್ತುವಂತೆ ಕರೆ ನೀಡಿದೆ.

ಇದನ್ನೂ ನೋಡಿ: ಆರ್‌ಎಸ್‌ಎಸ್‌ ನೋಂದಣಿ ಸುತ್ತಮುತ್ತ: ಎದ್ದಿರುವ ಪ್ರಶ್ನೆಗಳೇನು?

Donate Janashakthi Media

Leave a Reply

Your email address will not be published. Required fields are marked *