ಬೀದಿಗೆ ಬಿದ್ದ ವಿಕಲಚೇತನ ಮಹಿಳೆಯರು: ಕಣ್ಣು ಮುಚ್ಚಿಕುಳಿತ ಜಿಲ್ಲಾಡಳಿತ

ಪುನರ್ ವಸತಿ ಮತ್ತು ಸೌಲಭ್ಯಗಳನ್ನು ಕಲ್ಪಿಸಲು ಶಾಶ್ವತ ಪರಿಹಾರಕ್ಕಾಗಿ ಮನವಿ
ಹಾವೇರಿ: ವಿಕಲಚೇತನರಿಗೆ ಪುನರ್ ವಸತಿ ಮತ್ತು ಸೌಲಭ್ಯಗಳನ್ನು ಕಲ್ಪಿಸಲು ಒತ್ತಾಯಿಸಿ, ಮತ್ತೆ ಅನ್ಯಾಯ ವೆಸಗಿದ ಕಲ್ಮೇಶ್ವರ ಸಂಸ್ಥೆ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ, ಶಾಶ್ವತ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಬೆಂಬಲದೊಂದಿಗೆ ವಿಕಲಚೇತನರು ಮಾನ್ಯ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಅವರಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು.

ಹತ್ತಾರು ವರ್ಷಗಳಿಂದ ಆಶ್ರಯ ನೀಡಿ ಅನೇಕ ವಿಕಲಚೇತನ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಶಿಕ್ಷಣ, ಉದ್ಯೋಗ ಸೇರಿದಂತೆ ಸ್ವತಂತ್ರರಾಗಿ ಘನತೆ ಬದುಕು ಕಟ್ಟಿಕೊಳ್ಳಲು ಸಹಾಯಕಾರಿಯಾಗಿದ್ದ ಕಲ್ಮೇಶ್ವರ ವಿದ್ಯಾ ಸಂಸ್ಥೆಯು ಸರ್ಕಾರದ ಯಾವುದೇ ಆದೇಶಗಳಿಲ್ಲದೆ ಮತ್ತೆ ವಸತಿ ನಿಲಯದಲ್ಲಿದ್ದ ಐದು ಜನ ವಿಕಲಚೇತನರನ್ನು ಹೊರದೂಡುವ ಕಾರ್ಯವನ್ನು ಎಸ್ಎಫ್ಐ ಹಾವೇರಿ ಜಿಲ್ಲಾ ಸಮಿತಿಯು ಹಾಗೂ ಅಂಗವಿಕಲರ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ.

ವಿದ್ಯಾರ್ಥಿನಿ ಹೇಮಾ ಪ್ರಕಾಶ್ ಮಾತನಾಡಿ, ನೂರಾರು ಕನಸುಗಳನ್ನು ಕಟ್ಟಿಕೊಂಡು ಸ್ವಂತ ಕಾಲಮೇಲೆ ನಿತ್ತು ಘನತೆ ಜೀವನವನ್ನು ರೂಪಿಸಿಕೊಳ್ಳಬೇಕೆಂಬ ಆಸೆಗೆ ಆಶ್ರಯ ಬೇಕಿದೆ. ಬಾಡಿಗೆ ಮನೆ ಸಿಗುತ್ತಿಲ್ಲ ಎಂದು ಸಂಸ್ಥೆ ಮುಖ್ಯಸ್ಥರು ನಿಮ್ಮ ಮನೆಗಳಿಗೆ ಹೋಗಿ ಎಂದಿದ್ದಾರೆ. ಮನೆಗೆ ಹೋದರೆ ಸಮಾಜದಲ್ಲಿ ಬದುಕುವುದು ಬಹಳಷ್ಟು ಕಷ್ಟವಾಗುತ್ತದೆ. ಬಸ್ ಗಳಲ್ಲಿ, ರಸ್ತೆಗಳಲ್ಲಿ ವಿಪರೀತ ಜನಸಂದಣಿಯ ಮಧ್ಯೆ ಓಡಾಡಲು ಕಷ್ಟವಾಗುತ್ತದೆ.

ಇದನ್ನೂ ಓದಿ: ಮಳೆ ಸುರಿದರೂ ನೀರಿನ ಬರ ತಪ್ಪಿಲ್ಲ: ಮಹಾರಾಷ್ಟ್ರದ 1,279 ಗ್ರಾಮಗಳಿಗೆ ಟ್ಯಾಂಕರ್ ನೀರೇ ಆಧಾರ

ಈ ಹಿಂದೆ ಎಸ್ಎಫ್ಐ ಹೋರಾಟ ಹಾಗೂ ಮಾಧ್ಯಮದವರು ವರದಿ ಮಾಡುವ ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಶ್ರೀನಿವಾಸ ಅಲದರ್ತಿ ಅವರು ಕಲ್ಮೇಶ್ವರ ಸಂಸ್ಥೆ ಮುಖ್ಯಸ್ಥ ದಯಾನಂದ ಅವರಿಗೆ ದೂರವಾಣಿ ಸಂಪರ್ಕ ಮಾಡಿ ಯಾವುದೇ ಕಾರಣಕ್ಕೂ ವಿಕಲಚೇತನರನ್ನು ಹೊರಗಡೆ ಕಳಿಸಬೇಡಿ ಎಂದು ತರಾಟೆಗೆ ತೆಗೆದುಕೊಂಡರು. ತಾವೇ ಸ್ವತಃ ಗುಂಟ್ಟುಮುಟ್ಟೆಗಳನ್ನು ಒಳಗಡೆ ಇರಿಸಿದರು.

ವಿಕಲಚೇತನರಿಗೆ ಯಾವುದೇ ತೊಂದರೆ ನೀಡಿದಂತೆ ಕ್ರಮಕೈಗೊಳಲಾಗುವುದು ಎಂದು ಭರವಸೆ ನೀಡಿದರು. ಆದರೆ ಈಗ ಎಪ್ರಿಲ್ ರಿಂದ ಸಂಸ್ಥೆಯನ್ನೆ ರಜೆ ನೆಪದಲ್ಲಿ ಈಗಾಗಲೇ ಮುಚ್ಚಿ ಬೀದಿಗೆ ತಳ್ಳಿದ್ದಾರೆ.

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ,  ಅಂಗವಿಕಲ ಸ್ತ್ರೀಯರಿಗೆ ಖಾಯಂ ಪುನರ್ವಸತಿ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಲು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯಿದೆ 2016 ರ ಜಾರಿಯ ಬಗೆಗಿನ ಜಿಲ್ಲಾ ಕಮಿಷನರಾದ ಜಿಲ್ಲಾಧಿಕಾರಿಗಳಲ್ಲಿ ಮಾನವೀಯಾಡುತ್ತಿದೇವೆ. ಕೂಡಲೇ ಕಲ್ಮೇಶ್ವರ ಗ್ರಾಮೀಣ ಸಂಸ್ಥೆಯ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಸಂಸ್ಥೆ ಮುಚ್ಚುವುದು ಸರ್ಕಾರದ ನಿಯಮಗಳ ಉಲ್ಲಂಘನೆ ಆಗಿದೆ.

ಅನುದಾನ, ರಜೆ ನೆಪ ಬಿಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ  ಅನುದಾನಿತ ಸಂಸ್ಥೆಗಳನ್ನು ಮುಚ್ಚಿ ನೇರವಾಗಿ ಇಲಾಖೆಯೇ ನಿರ್ವಹಣೆ ಮಾಡಬೇಕು ಶಾಶ್ವತ ಪರಿಹಾರವನ್ನು ಒದಗಿಸಬೇಕು ನಿರ್ಲಕ್ಷ್ಯ ವಹಿಸಿದ್ದೆ ಆದಲಿ ಜಿಲ್ಲಾಡಳಿತ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು.

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಯ ಅಧಿಕಾರಗಳ ಜೊತೆಗೆ ಚರ್ಚೆಸಿ ಪರಿಹಾರ ಕಲ್ಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಗಿರಿಜಾ ಗೌಳಿ, ಸುಮಾ ಸಿ ಡಿ, ಪೂಜಾ ಬಾರ್ಕಿ, ಎಸ್ಎಫ್ಐ ಮುಖಂಡರಾದ ಶಂಭುಲಿಂಗ ಸವದತ್ತಿ, ಅರುಣ್ ನಗವತ್, ಪರಶುರಾಮ ಎಸ್, ಕಾಂತೇಶ ಹಳ್ಳೆರ, ಪ್ರವೀಣ್ ಮಟ್ಟೇರ್ ಉಪಸ್ಥಿತರಿದ್ದರು.

ಇದನ್ನೂ ನೋಡಿ: ಚೇಳುಗಳ ವಿಸ್ಮಯ ಜಗತ್ತು: ಗೊತ್ತಿಲ್ಲದ ಅಚ್ಚರಿಯ ಸತ್ಯಗಳು | ಡಾ: ಎನ್.ಬಿ.ಶ್ರೀಧರ Janashakthi Media

Donate Janashakthi Media

Leave a Reply

Your email address will not be published. Required fields are marked *